ಐಎನ್‍ಟಿಯುಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸವಿತಾಬಾಯಿ ನೇಮಕ
Update: 2021-07-17 20:33 IST
ಬೆಂಗಳೂರು, ಜು. 17: 'ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್'(ಐಎನ್‍ಟಿಯುಸಿ) ಮಹಿಳಾ ಘಟಕದ ರಾಜ್ಯಾಧ್ಯಕ್ಷೆಯನ್ನಾಗಿ ದಾವಣ ಗೆರೆಯ ಸವಿತಾಬಾಯಿ ಮಲ್ಲೇಶ್ ನಾಯ್ಕ್ ಅವರನ್ನು ನೇಮಿಸಿ, ರಾಷ್ಟ್ರೀಯ ಅಧ್ಯಕ್ಷ ಸ್ವಾಮಿನಾಥ ಜಯಸ್ವಾಲ್ ಆದೇಶಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ವರ್ಚುವಲ್ ಸಭೆಯಲ್ಲಿ ಐಎನ್‍ಟಿಯುಸಿಯ ಪದಾಧಿಕಾರಿಗಳು ಸವಿತಾಬಾಯಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದು, ಕರ್ನಾಟಕ ರಾಜ್ಯದಲ್ಲಿ ಅಸಂಘಟಿತ ವಲಯದ ಕಾರ್ಮಿಕರ ಪರ ಹೋರಾಟ ನಡೆಸಿ ನ್ಯಾಯ ಒದಗಿಸಲು ಮತ್ತು ಅವರಿಗೆ ಸೇವಾ ಭದ್ರತೆ ಜತೆಗೆ ಸಾಮಾಜಿಕ ರಕ್ಷಣೆ ಒದಗಿಸಲು ರಾಷ್ಟ್ರೀಯ ಅಧ್ಯಕ್ಷರು ಸೂಚಿಸಿದ್ದಾರೆ.
ಕಾಂಗ್ರೆಸ್‍ನ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸವಿತಾಬಾಯಿ ಅವರು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಪರ ಕಾರ್ಯನಿರ್ವಹಿಸಲು ಸೂಚಿಸಿದ್ದಾರೆ. ಜತೆಗೆ ಮಹಿಳಾ ಕಾರ್ಮಿಕರಿಗೆ ಕೋವಿಡ್ ಸಂದರ್ಭದಲ್ಲಿ ನೆರವಾಗಲಿ ಎಂದು ಸಲಹೆ ನೀಡಿದ್ದಾರೆ.