×
Ad

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಬಿಜೆಪಿ ಶಾಸಕ ಎಸ್.ರಘು ವಿರುದ್ಧ ಕ್ರಮಕ್ಕೆ ಮನವಿ

Update: 2021-07-18 00:39 IST

ಬೆಂಗಳೂರು, ಜು. 17: ಇಲ್ಲಿನ ಸಿವಿ ರಾಮನ್ ನಗರ ಕ್ಷೇತ್ರದ ಬಿಜೆಪಿಯ ಶಾಸಕ ಎಸ್.ರಘು ಅವರು ಕ್ಷೇತ್ರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇರುವ ವಿವಿಧ ಸಂಘ-ಸಂಸ್ಥೆಗಳ ಫಲಕಗಳ ತೆರವಿಗೆ ತಾವೇ ಮುಂದಾಗಿದ್ದು, ಕೆಲವು ಕಡೆಗಳಲ್ಲಿ ಅಂಬೇಡ್ಕರ್‍ಗೆ ಅವಮಾನ ಮಾಡಲಾಗಿದೆ. ಆದುದರಿಂದ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಕೋರಿ `ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟ' ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದೆ.

ಶನಿವಾರ ಒಕ್ಕೂಟದ ಅಧ್ಯಕ್ಷ ಚನ್ನಕೃಷ್ಣಪ್ಪ ನೇತೃತ್ವದ ಮುಖಂಡರ ನಿಯೋಗ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಎಸ್.ರಘು ವಿರುದ್ಧ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು. ಅವರ ರಾಜೀನಾಮೆ ಪಡೆಯಬೇಕು. ಎಸ್ಸಿಪಿ-ಟಿಎಸ್ಪಿ ಅನುದಾನ ಸಮರ್ಪಕ ಬಳಕೆ ಜೊತೆಗೆ ಮೊತ್ತ ಹೆಚ್ಚು ಮಾಡಬೇಕು. ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕೃಷಿ ಕೂಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕು. ದಲಿತ ಸಮುದಾಯದ ಸಬಲೀಕರಣಕ್ಕೆ ಕ್ರಮ ವಹಿಸಬೇಕು ಎಂದು ಆಗ್ರಹಿಸಲಾಯಿತು.

ನಿಯೋಗದಲ್ಲಿ ದಲಿತ ಮುಖಂಡರಾದ ಆರ್.ಎಂ.ಎಸ್.ರಮೇಶ್, ಪಿ.ಮೂರ್ತಿ, ಸೋರಹುಣಸೆ ವೆಂಕಟೇಶ, ಚಂದ್ರಪ್ಪ ಸೇರಿದಂತೆ ಇನ್ನಿತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News