×
Ad

ಬಾಂಗ್ಲಾ ಯುವತಿಯ ಲೈಂಗಿಕ ದೌರ್ಜನ್ಯ ಪ್ರಕರಣ: ಮಾಹಿತಿ ಕಲೆಹಾಕಿದ ಎನ್‍ಐಎ

Update: 2021-07-18 16:37 IST

ಬೆಂಗಳೂರು, ಜು. 18: ಬಾಂಗ್ಲಾದೇಶದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಆರೋಪಿಗಳ ವಶದಲ್ಲಿದ್ದ ಯುವತಿಯರ ಬಗ್ಗೆ ಮಾಹಿತಿ ಹಾಗೂ ಸ್ಥಳೀಯ ದಾಖಲೆ ನೀಡುವಂತೆ ಪೂರ್ವ ವಿಭಾಗದ ಪೊಲೀಸರನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಕೇಳಿದೆ.

ಮೇ.27ರಂದು ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಂಗ್ಲಾ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಪ್ರಾಥಮಿಕ ಆರೋಪಪಟ್ಟಿಯನ್ನು ಸಲ್ಲಿಸಿದರು.

ಇದಲ್ಲದೇ ಆರೋಪಿಗಳ ವಶದಲ್ಲಿದ್ದ 7 ಮಂದಿ ಬಾಂಗ್ಲಾ ಯುವತಿಯರನ್ನೂ ನಕಲಿ ಭಾರತೀಯ ದಾಖಲೆ ಸಹಿತ ವಶಕ್ಕೆ ಪಡೆಯಲಾಗಿತ್ತು. ಬಳಿಕ ಪ್ರಕರಣವನ್ನ ಹೆಣ್ಣೂರು ಠಾಣೆಗೆ ವರ್ಗಾಯಿಸಲಾಗಿತ್ತು. ನಕಲಿ ದಾಖಲೆ ಸೃಷ್ಟಿಸಿ ಯುವತಿಯರನ್ನ ಕರೆತಂದಿದ್ದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಎನ್‍ಐಎ ಮುಂದಾಗಿ ದಾಖಲೆಗಳನ್ನು ಕೇಳಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News