×
Ad

ಜು.19ರಿಂದ ಮಂಗಳೂರು-ಕಾಸರಗೋಡು ಬಸ್ ಸಂಚಾರ ಪುನರಾರಂಭ: ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ

Update: 2021-07-18 17:52 IST

ಮಂಗಳೂರು, ಜು.18: ಮಂಗಳೂರು-ಕಾಸರಗೋಡು ಮಧ್ಯೆ ಖಾಸಗಿ ಮತ್ತು ಸರಕಾರಿ ಬಸ್‌ಗಳ ಸಂಚಾರವು ಜು.19ರಿಂದ ಪುನರಾರಂಭಗೊಳ್ಳಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಕೋವಿಡ್-19 ಆನ್‌ಲಾಕ್ ಪ್ರಕ್ರಿಯೆ ಈಗಲೂ ಜಾರಿಯಲ್ಲಿದೆ, ಕೊರೋನ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆ ವಹಿಸುವ ಅನಿವಾರ್ಯತೆಯೂ ಇದೆ. ಮುಂದಿನ ದಿನಗಳಲ್ಲಿ ಎದುರಾಗಬಹುದಾದ 3 ನೇ ಕೋವಿಡ್ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಅದರಂತೆ ಪ್ರಸ್ತುತ ರಾಜ್ಯ ಸರಕಾರವು ಕೇರಳದ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ-ವಹಿವಾಟು ಸೇರಿದಂತೆ ಇತರ ಕಾರಣಗಳಿಗೆ ಭಾರೀ ಸಂಖ್ಯೆಯಲ್ಲಿ ದಿನನಿತ್ಯ ಸಾವಿರಾರು ಮಂದಿಯ ಸಂಚಾರಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ.

ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ ಕನಿಷ್ಠ 1 ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಆಯಾ ಬಸ್‌ನ ನಿರ್ವಾಹಕರು (ಕಂಡೆಕ್ಟರ್) ಖಚಿತಪಡಿಸ ಕೊಳ್ಳಬೇಕು. ಕೋವಿಡ್ ಮಾರ್ಗಸೂಚಿಯನ್ನು (ಮುಖಗವಸು, ಸ್ಯಾನಿಟೈಸರ್, ಸುರಕ್ಷಿತ ಅಂತರ) ಕಡ್ಡಾಯವಾಗಿ ಪಾಲಿಸಬೇಕು.

ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News