2021-22ನೇ ಸಾಲಿನ ಶೈಕ್ಷಣಿಕ ಶಾಲೆ ಆರಂಭದ ಬಗ್ಗೆ ಶಿಕ್ಷಣ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚನೆ
Update: 2021-07-18 18:19 IST
ಬೆಂಗಳೂರು, ಜು. 18: 2021-22ನೆ ಶೈಕ್ಷಣಿಕ ಸಾಲಿನ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ಕಾರ್ಯಪಡೆ ಸಮಿತಿಯಲ್ಲಿ ಶಾಲೆಗಳ ಪ್ರತಿನಿಧಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು, ನಿಮ್ಹಾನ್ಸ್ ವೈದ್ಯರು, ಜಯದೇವ ಆಸ್ಪತ್ರೆಯ ವೈದ್ಯರು, ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಪ್ರತಿನಿಧಿಗಳು ಇದ್ದಾರೆಂದು ಮಾಹಿತಿ ನೀಡಿದ್ದಾರೆ.
2021-22ನೇ ಶೈಕ್ಷಣಿಕ ಸಾಲಿನಲ್ಲಿ ಯಾವ ತರಗತಿಗಳನ್ನು ಮೊದಲು ಪ್ರಾರಂಭಿಸಬೇಕು, ಯಾವಾಗ ಆರಂಭಿಸಬೇಕು, ಯಾವ ರೀತಿ ಪ್ರಾರಂಭಿಸಬೇಕೆಂಬುದನ್ನು ಕಾರ್ಯಪಡೆ ಈ ತಿಂಗಳ ಅಂತ್ಯದಲ್ಲಿ ಸರಕಾರಕ್ಕೆ ವರದಿ ನೀಡಲಿದೆ. ಆ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.