×
Ad

ಪೌರಕಾರ್ಮಿಕ ವಾಹನ ಚಾಲಕರಿಗೆ ರೈನ್ ಕೋಟ್ ನೀಡಿ: ಆನಂದ್ ಒತ್ತಾಯ

Update: 2021-07-18 18:25 IST

ಬೆಂಗಳೂರು, ಜು. 18: ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ವಾಹನ ಚಾಲಕ ಹಾಗೂ ನಿರ್ವಾಹಕರಿಗೆ ಗ್ಲೌಸ್, ರೈನ್ ಕೋಟ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಪೌರಕಾರ್ಮಿಕರ ಪರಿವರ್ತನಾ ಸಂಘದ ಅಧ್ಯಕ್ಷ ಆನಂದ್ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಳೆಗಾಲ ಪ್ರಾರಂಭವಾಗಿರುವುದರಿಂದ ಪೌರಕಾರ್ಮಿಕರು ಮಳೆಯ ನಡುವೆ ಕಾರ್ಯನಿರ್ವಹಿಸಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ಪೌರಕಾರ್ಮಿಕ ವಾಹನ ಚಾಲಕರು ಹಾಗೂ ನಿರ್ವಾಹಕರಿಗೆ ಅಗತ್ಯ ಸೌಲಭ್ಯಗಳಿಲ್ಲದೆ ಸಮಸ್ಯೆಗೆ ಸಿಲುಕಿದ್ದಾರೆ. ಇವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕೆಂದು ತಿಳಿಸಿದ್ದಾರೆ.

ಬಯೋಮೆಟ್ರಿಕ್ ಬೇಡ: ಪೌರಕಾರ್ಮಿಕರು ಬೆಳಗ್ಗೆ 5ಗಂಟೆಯಿಂದಲೇ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತಾರೆ. ನಾನಾ ಕಾರಣಗಳಿಂದಾಗಿ ಪೌರಕಾರ್ಮಿಕರ ಕೈ ಬೆರಳುಗಳು ಬಯೋಮೆಟ್ರಿಕ್‍ಗೆ ಹೊಂದಾಣಿಕೆ ಆಗುವುದಿಲ್ಲ. ಹೀಗಾಗಿ ಪೌರಕಾರ್ಮಿಕರಿಗೆ ಬಯೋಮೆಟ್ರಿಕ್ ವ್ಯವಸ್ಥೆ ರದ್ದು ಪಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News