×
Ad

ಎನ್‌ಎಸ್‌ಯುಐ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ

Update: 2021-07-18 19:40 IST

ಮಂಗಳೂರು, ಜು.18: ಎನ್‌ಎಸ್‌ಯುಐ ದ.ಕ. ಜಿಲ್ಲಾ ಸಮಿತಿಯ ನೂತನ ಜಿಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಸಮಾರಂಭದಲ್ಲಿ ‘ಶಿಕ್ಷಣ ನಮ್ಮ ಹಕ್ಕು’ ವಿದ್ಯಾರ್ಥಿ ಅಭಿಯಾನದ ಪೋಸ್ಟರ್‌ನ್ನು ಬಿಡುಗಡೆಗೊಳಿಸಲಾಯಿತು. ನೂತನ ಪದಾಧಿಕಾರಿಗಳಿಗೆ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯದರ್ಶಿ ಪಿ.ವಿ. ಮೋಹನ್ ಪ್ರತಿಜ್ಞಾವಿಧಿ ಬೋಧಿಸಿದರು. ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ನೇಮಕಾತಿ ಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯದರ್ಶಿ ಐವನ್ ಡಿಸೋಜ, ರಾಜ್ಯ ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಫಾರೂಕ್ ಬಯಾಬೆ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ, ಕಾಂಗ್ರೆಸ್ ಮುಖಂಡರಾದ ಲಾರೆನ್ಸ್ ಡಿಸೋಜ, ಅಬ್ಬಾಸ್ ಅಲಿ, ಶುಭೋದಯ ಆಳ್ವ, ನೀರಜ್ ಪಾಲ್, ಅನಿಲ್ ಕಂಕನಾಡಿ, ಸುಹೈಲ್ ಕಂದಕ್, ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಪೂಜಾರಿ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ರಾಕೇಶ್ ದೇವಾಡಿಗ, ಉಪಾಧ್ಯಕ್ಷ ಶೇಖ್ ಅಫ್ಶನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News