×
Ad

ಉಡುಪಿ : 105 ಮಂದಿಗೆ ಕೊರೋನ ಪಾಸಿಟಿವ್, ಕೋವಿಡ್ ಗೆ ಮಹಿಳೆ ಬಲಿ

Update: 2021-07-18 20:26 IST

ಉಡುಪಿ, ಜು.18: ರವಿವಾರ ಜಿಲ್ಲೆಯಲ್ಲಿ 105 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದು, ಕಾರ್ಕಳದ ಓರ್ವ ಮಹಿಳೆ ಸೊಂಕಿಗೆ ಬಲಿಯಾಗಿ ದ್ದಾರೆ. ದಿನದಲ್ಲಿ 105 ಮಂದಿ ಗುಣಮುಖರಾಗಿದ್ದು, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 864 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಕೋವಿಡ್-19 ಸೋಂಕಿನಿಂದ ಕಾರ್ಕಳದ 63 ವರ್ಷ ಪ್ರಾಯದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಸಾಂಕ್ರಾಮಿಕಕ್ಕೆ ಬಲಿ ಯಾದ ವರ ಸಂಖ್ಯೆ 405ಕ್ಕೇರಿದೆ. ಮಧುಮೇಹ, ಕಿಡ್ನಿ ಸಮಸ್ಯೆಗಳೊಂದಿಗೆ ಕೋವಿಡ್‌ನ ಲಕ್ಷಣ, ಉಸಿರಾಟದ ತೊಂದರೆ ಹಾಗೂ ನ್ಯೂಮೋನಿಯಕ್ಕಾಗಿ ಮಹಿಳೆ ಜು.9ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಶನಿವಾರ ಮೃತಪಟ್ಟರು.

ದಿನದಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟ 105 ಮಂದಿಯಲ್ಲಿ 44 ಮಂದಿ ಪುರುಷರು ಹಾಗೂ 61 ಮಂದಿ ಮಹಿಳೆಯರು. ಉಡುಪಿ ತಾಲೂಕಿನ 47, ಕುಂದಾಪುರ ತಾಲೂಕಿನ 31, ಕಾರ್ಕಳ ತಾಲೂಕಿನ 26 ಹಾಗೂ ಒಬ್ಬರು ಹೊರಜಿಲ್ಲೆಯವರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 9 ಮಂದಿ ಕೋವಿಡ್‌ಆಸ್ಪತ್ರೆ ಹಾಗೂ ಉಳಿದ 96 ಮಂದಿ ಮನೆಯಲ್ಲೇ ಚಿಕಿತ್ಸೆಯಲ್ಲಿದ್ದಾರೆ.

ಶನಿವಾರ 105 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 67,034ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 37973 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆ ಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದ ವರ ಸಂಖ್ಯೆ ಈಗ 68,303ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,36,267 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇಂದು ಯಾರಲ್ಲೂ ಹೊಸದಾಗಿ ಬ್ಲಾಕ್‌ಫಂಗಸ್ ಸೋಂಕು ಪತ್ತೆಯಾಗಿಲ್ಲ. ಸದ್ಯ ಜಿಲ್ಲೆಯಲ್ಲಿ ಹತ್ತು ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.

1848 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ರವಿವಾರ 1,848 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 1,647 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 201 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 614 ಮಂದಿ, 45 ವರ್ಷ ಮೇಲಿನ 1227 ಮಂದಿ, ನಾಲ್ವರು ಆರೋಗ್ಯ ಕಾರ್ಯಕರ್ತರು ಹಾಗೂ ಮೂವರು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News