ಅನಿಲ್ ದೇಶ್ಮುಖ್ ನಿವಾಸದಲ್ಲಿ ಅಧಿಕಾರಿಗಳಿಂದ ಶೋಧ ಕಾರ್ಯಾಚರಣೆ

Update: 2021-07-18 20:26 GMT

ಮುಂಬೈ, ಜು.18: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಸೇರಿದ 2 ಮನೆಗಳಲ್ಲಿ ರವಿವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿರುವುದಾಗಿ ವರದಿಯಾಗಿದೆ. ‌

ನಾಗಪುರದಿಂದ ಸುಮಾರು 60 ಕಿ.ಮೀ ದೂರದ ಕಾಟೊಲ್ ನಗರದಲ್ಲಿರುವ ಮನೆ ಹಾಗೂ ವಾಡ್ವಿಹಿರಾ ಗ್ರಾಮದಲ್ಲಿರುವ ಪೂರ್ವಿಕರ ಮನೆಯಲ್ಲಿ ಶೋಧ ನಡೆಸಲಾಗಿದೆ. ಜಾರಿ ನಿರ್ದೇಶನಾಲಯದ 6 ಅಧಿಕಾರಿಗಳು ಹಾಗೂ ಸಿಆರ್ಪಿಎಫ್ನ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳು ಹೇಳಿವೆ.

ದೇಶ್ಮುಖ್ ಗೃಹ ಸಚಿವರಾಗಿದ್ದ ಸಂದರ್ಭ, ಮುಂಬೈಯ ಬಾರ್ ಗಳು ಮತ್ತು ಹೋಟೆಲ್ಗಳಿಂದ 100 ಕೋಟಿ ರೂ. ವಸೂಲಿ ಮಾಡುವಂತೆ ಪೊಲೀಸರಿಗೆ ಆದೇಶಿಸಿದ್ದರು ಎಂದು ಮುಂಬೈ ಪೊಲೀಸ್ ಇಲಾಖೆಯ ಮಾಜಿ ಮುಖ್ಯಸ್ಥ ಪರಮ್ಬೀರ್ ಸಿಂಗ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿದ್ದು ಈ ಹಿನ್ನೆಲೆಯಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News