ದ.ಕ. ಜಿಲ್ಲಾಧಿಕಾರಿ ಕಚೇರಿಯ ಲಿಫ್ಟ್‌ನಲ್ಲಿ ಸಿಲುಕಿದ ಮಹಿಳೆ: ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ
Update: 2021-07-19 09:51 IST
ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ಲಿಫ್ಟ್‌ನಲ್ಲಿ ಮಹಿಳೆಯೊಬ್ಬರು ಸಿಲುಕಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ವಾಣಿ (43) ಲಿಫ್ಟ್‌ನಲ್ಲಿ ಸಿಲುಕಿದ ಮಹಿಳೆ ಎಂದು ತಿಳಿದುಬಂದಿದೆ.
ಬೆಳಗ್ಗೆ 8 ಗಂಟೆಯ ಸುಮಾರಿಗೆ ಮಹಿಳೆಯು ಲಿಫ್ಟ್ ಬಳಸುವಾಗ ದಿಢೀರ್‌ನೇ ಸ್ಥಗಿತಗೊಂಡಿದೆ. ನಂತರ ವಿಷಯ ಅಗ್ನಿಶಾಮಕ ದಳದ ಪಾಂಡೇಶ್ವರ ಠಾಣೆಗೆ ಮುಟ್ಟಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಯಂತ್ರ ಬಳಸಿ ಲಿಫ್ಟ್‌ನ ಬಾಗಿಲನ್ನು ಕತ್ತರಿಸಿದ್ದಾರೆ. 30 ನಿಮಿಷಗಳ ಕಾರ್ಯಾಚರಣೆ ನಂತರ ಲಿಫ್ಟ್‌ನಲ್ಲಿ ಸಿಲುಕಿದ್ದ ಮಹಿಳೆಯನ್ನು ಯಶಸ್ವಿಯಾಗಿ ರಕ್ಷಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.