×
Ad

ಮಂಗಳವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ಸುರೇಶ್‌ಕುಮಾರ್

Update: 2021-07-19 17:33 IST

ಬೆಂಗಳೂರು, ಜು.19: 2020–21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ (ಜು.20) ಮಧ್ಯಾಹ್ನದ ನಂತರ ಪ್ರಕಟಿಸಲಾಗುವುದೆಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದ್ದಾರೆ.

ಸೋಮವಾರ ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಆತಂಕ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಈ ಹಿಂದಿನ ಎಸೆಸೆಲ್ಸಿ ಮತ್ತು ಪ್ರಥಮ ಪಿಯುಸಿ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ನೀಡಿದ ಅಂಕಗಳ ಆಧಾರದಲ್ಲಿ ಪಾಸು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ರ‍್ಯಾಂಕ್ ಪಟ್ಟಿ ಘೋಷಿಸುವುದಿಲ್ಲ. ಹೀಗಾಗಿ ಯಾವ ರೀತಿಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ನಾಳೆ ವಿವರವಾಗಿ ಮಾಹಿತಿ ನೀಡುತ್ತೇನೆಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News