ಅಂತರ್ ರಾಷ್ಟ್ರೀಯ ಕ್ರಿಕೆಟ್ ನಲ್ಲಿ 10,000 ರನ್ ಪೂರೈಸಿದ ಶಿಖರ್ ಧವನ್

Update: 2021-07-19 12:06 GMT

ಕೊಲಂಬೊ: ಭಾರತದ ಸೀಮಿತ ಓವರ್ ಗಳ ಕ್ರಿಕೆಟ್ ಪಂದ್ಯದ ಹಂಗಾಮಿ ನಾಯಕ ಶಿಖರ್ ಧವನ್ ಅಂತರ್ ರಾಷ್ಟ್ರೀಯ ಕ್ರಿಕೆಟ್ ನಲ್ಲಿ ಆರಂಭಿಕ ಆಟಗಾರನಾಗಿ 10,000 ರನ್ ಪೂರೈಸಿದ್ದಾರೆ. ಈ ಸಾಧನೆ ಮಾಡಿದ ಭಾರತದ 5ನೇ ಆರಂಭಿಕ ಬ್ಯಾಟ್ಸ್ ಮನ್ ಆಗಿದ್ದಾರೆ.

ಎಡಗೈ ಬ್ಯಾಟ್ಸ್ ಮನ್ ಧವನ್ ಶ್ರೀಲಂಕಾ ವಿರುದ್ಧ ಪ್ರೇಮದಾಸ ಸ್ಟೇಡಿಯಂನಲ್ಲಿ ರವಿವಾರ ನಡೆದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಈ ಸಾಧನೆ ಮಾಡಿದರು.

ಧವನ್ ಅವರು 50 ಓವರ್ ಮಾದರಿ ಕ್ರಿಕೆಟ್ ನಲ್ಲಿ 6,000 ರನ್ ಪೂರೈಸಿರುವ ಭಾರತದ 10ನೇ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ವೀರೇಂದ್ರ ಸೆಹ್ವಾಗ್, ಸಚಿನ್ ತೆಂಡುಲ್ಕರ್, ಸುನೀಲ್ ಗವಾಸ್ಕರ್ ಹಾಗೂ ರೋಹಿತ್ ಶರ್ಮಾ ಅವರು ಅಂತರ್ ರಾಷ್ಟ್ರೀಯ ಕ್ರಿಕೆಟ್ ನಲ್ಲಿ 10,000ಕ್ಕೂ ಅಧಿಕ ರನ್ ಗಳಿಸಿರುವ ಭಾರತದ ಆರಂಭಿಕ ಬ್ಯಾಟ್ಸ್ ಮನ್ ಗಳಾಗಿದ್ದಾರೆ.

ತೆಂಡುಲ್ಕರ್, ವಿರಾಟ್ ಕೊಹ್ಲಿ, ಸೌರವ್ ಗಂಗುಲಿ, ರಾಹುಲ್ ದ್ರಾವಿಡ್, ಎಂ.ಎಸ್. ಧೋನಿ, ಮುಹಮ್ಮದ್ ಅಝರುದ್ದೀನ್, ರೋಹಿತ್ ಶರ್ಮಾ, ಯುವರಾಜ್ ಸಿಂಗ್ ಹಾಗೂ ಸೆಹ್ವಾಗ್ ಅವರು ಏಕದಿನ ಕ್ರಿಕೆಟ್ ನಲ್ಲಿ 6,000ಕ್ಕೂ ಅಧಿಕ ರನ್ ಗಳಿಸಿರುವ ಭಾರತದ ಇತರ 9 ಬ್ಯಾಟ್ಸ್ ಮನ್ ಗಳಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News