×
Ad

ಉಳ್ಳಾಲ ವಿಧಾನಸಭಾ ಕ್ಷೇತ್ರದ ಎನ್.ಎಸ್.ಯು.ಐ ಅಧ್ಯಕ್ಷರಾಗಿ ಅಹ್ನಾಫ್ ಅಹ್ಮದ್ ನೇಮಕ

Update: 2021-07-19 18:49 IST

ಮಂಗಳೂರು: ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್.ಎಸ್.ಯು.ಐ) ಅಧ್ಯಕ್ಷರಾಗಿ ಅಹ್ನಾಫ್ ಅಹ್ಮದ್(ಡೀಲ್ಸ್) ಇವರು ನೇಮಕವಾಗಿದ್ದಾರೆ. ಶಾಸಕ ಯು.ಟಿ. ಖಾದರ್ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಎನ್.ಎಸ್.ಯು.ಐ ಪದಾಧಿಕಾರಿಗಳು ಇವರನ್ನು ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿದ್ದು, ಮಂಗಳೂರಿನ ಎಸ್ ಡಿ ಎಂ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. 

ಪ್ರಸ್ತುತ ಬಿ-ಹ್ಯುಮನ್ ಸಮಾಜಸೇವಾ ಸಂಸ್ಥೆಯ ಸಕ್ರಿಯ ಕಾರ್ಯಕರ್ತರಾಗಿರುವ ಇವರು ವಿದ್ಯಾರ್ಥಿ ದಿಸೆಯಿಂದಲೇ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News