×
Ad

ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನಟಿ ಶೃತಿ ನೇಮಕ

Update: 2021-07-19 22:10 IST

ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನಟಿ ಶೃತಿ ನೇಮಕಬೆಂಗಳೂರು, ಜು. 19: `ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ'ಯ ಅಧ್ಯಕ್ಷರನ್ನಾಗಿ ಚಿತ್ರನಟಿ ಶೃತಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಶೃತಿ ಅವರನ್ನು ನಿನ್ನೆಯಷ್ಟೇ ಬದಲಾವಣೆ ಮಾಡಲಾಗಿತ್ತು. ಆ ಸ್ಥಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಿಸಲಾಗಿತ್ತು. ಇದರ ಬೆನ್ನಲ್ಲೇ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಎಂ.ಜೆಸಿಂತ, ಶೃತಿ ಅವರನ್ನು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News