ಮೂರನೇ ಬಾರಿಗೆ ಉಡುಪಿ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ!

Update: 2021-07-19 17:14 GMT
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಜು.19: ಇದೀಗ ಮೂರನೇ ಬಾರಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೆಸರಿನಲ್ಲಿ ದುಷ್ಕರ್ಮಿಗಳು ಫೇಸ್‌ಬುಕ್ ನ ನಕಲಿ ಖಾತೆಯನ್ನು ಸೃಷ್ಠಿಸಿದ್ದಾರೆ.

ಜು.17ರಂದು ಅಪರಿಚಿತ ವ್ಯಕ್ತಿಗಳು ಜಿಲ್ಲಾಧಿಕಾರಿ ಜಿ.ಜಗದೀಶ್ ಎಂಬ ನಕಲಿ ಫೇಸ್ಬುಕ್ ಖಾತೆಯನ್ನು ಸೃಷ್ಟಿಸಿ, ಅದರ ಫ್ರೊಪೈಲ್ ಫೋಟೋಗೆ ಡಿಸಿಯ ಫೋಟೋವನ್ನು ದುರ್ಬಳಕೆ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ವೈಯಕ್ತಿಕ ಗೌರವಕ್ಕೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಈ ಖಾತೆಯನ್ನು ತೆರೆದು ಹಣವನ್ನು ಕೇಳುತ್ತಿರುವ ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬಗ್ಗೆ ಉಡುಪಿ ಸೆನ್ ಠಾಣೆಗೆ ದೂರು ನೀಡಲಾಗಿದೆ. ಇದೇ ರೀತಿ ಈ ಹಿಂದೆ ಎರಡು ಬಾರಿ ಇವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಠಿಸಿ ಅವರ ಆಪ್ತ ವಲಯದಲ್ಲಿ ಹಣ ಕೇಳಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News