×
Ad

​ಮುಕ್ತ ವಿವಿಯಲ್ಲಿ ಎಂಬಿಎ ಕೋರ್ಸ್ ಆರಂಭ

Update: 2021-07-19 23:38 IST

ಉಡುಪಿ, ಜು.19: ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು (ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಟ್ರೇಷನ್- ಎಂಬಿಎ-) ಅನುಮತಿ ನೀಡಿದೆ.

ಮುಕ್ತ ಹಾಗೂ ದೂರ ಶಿಕ್ಷಣ ಮಾದರಿಯಡಿ ಎಂಬಿಎ ಕೋರ್ಸ್ ನಡೆಸಲು ಮಾನ್ಯತೆ ಪಡೆದಿರುವ ದೇಶದ ಏಕೈಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ಮುಕ್ತ ಹಾಗೂ ದೂರ ಶಿಕ್ಷಣ ಕಲಿಕಾ ವಿಧಾನದಡಿ ಎಂಬಿಎ ಕೋರ್ಸ್‌ಗೆ (ಜನರಲ್ ಅಡ್ಮಿನಿಸ್ಟ್ರೇಷನ್) 10,000 ಸೀಟುಗಳಿಗೆ ಪ್ರವೇಶ ಕಲ್ಪಿಸಲು ಎಐಸಿಟಿಇ ಅನುಮತಿ ನೀಡಿದೆ.

ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ತಾಂತ್ರಿಕ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ ನೀಡಿರುವುದಕ್ಕೆ ಕುಲಪತಿ ಪ್ರೊ.ಎಸ್. ವಿದ್ಯಾಶಂಕರ್ ಸಂತಸ ವ್ಯಕ್ತಪಡಿಸಿದ್ದು, ದೇಶಾದ್ಯಂತ ಒಟ್ಟು 18 ಮುಕ್ತ ವಿಶ್ವವಿದ್ಯಾನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಪೈಕಿ ಎಐಸಿಟಿಇಯಿಂದ ಮಾನ್ಯತೆ ಪಡೆದ ದೇಶದ ಮೊದಲ ಮುಕ್ತ ವಿಶ್ವವಿದ್ಯಾನಿಲಯ ಎಂದು ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News