×
Ad

ಉಡುಪಿ: ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ದಾಳಿ

Update: 2021-07-19 23:42 IST

ಉಡುಪಿ, ಜು.19: ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಸೋಮವಾರ ಉಡುಪಿ ತಾಲೂಕಿನ ಮಣಿಪಾಲ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ, ಒಟ್ಟು 23 ಪ್ರಕರಣ ದಾಖಲಿಸಿ, 7,900 ರೂ. ದಂಡ ವಸೂಲಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ನಾಗರತ್ನ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ, ಹಿರಿಯ ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಆರೋಗ್ಯ ಮೇಲ್ವಿಚಾರಕ ಸತೀಶ್ ರಾವ್, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ ಜಿಲ್ಲಾ ಸಂಯೋಜಕಿ ಡಾ. ಅಂಜಲಿ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News