ಉ.ಪ್ರ. ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ

Update: 2021-07-20 17:30 GMT

ಲಕ್ನೋ, ಜು. 20: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸಂಜಯ್ ಗಾಂಧಿ ಪೋಸ್ಟ್ ಗ್ರಾಜ್ಯುವೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ಮಂಗಳವಾರ ತಿಳಿಸಿದೆ. ‘‘ಕಲ್ಯಾಣ್ ಸಿಂಗ್ ಅವರ ಆರೋಗ್ಯ ಗಂಭೀರವಾಗಿದೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ತಜ್ಞರು ನಿಗಾ ವಹಿಸಿದ್ದಾರೆ. ಉಸಿರಾಟದ ಸಮಸ್ಯೆ ತೀವ್ರಗೊಂಡಿರುವುದರಿಂದ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ’’ ಎಂದು ಆಸ್ಪತ್ರೆಯ ಹೇಳಿಕೆ ತಿಳಿಸಿದೆ. ರಾಜಸ್ಥಾನದ ರಾಜ್ಯಪಾಲರೂ ಆಗಿದ್ದ 89ರ ಹರೆಯದ ಕಲ್ಯಾಣ್ ಸಿಂಗ್ ಅವರನ್ನು ಸೋಂಕು ಹಾಗೂ ಪ್ರಜ್ಞೆ ಕಳೆದುಕೊಂಡ ಹಿನ್ನೆಲೆಯಲ್ಲಿ ಜುಲೈ 4ರಂದು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News