ಯಾದಗಿರಿ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಕೊಲೆ

Update: 2021-07-21 08:46 GMT

ಯಾದಗಿರಿ: ಶಹಾಪುರ ತಾಲ್ಲೂಕಿನ ಗೋಗಿ ಗ್ರಾಮದಲ್ಲಿ ವ್ಯಕ್ತಿ ಓರ್ವನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ನಸುಕಿನ ಜಾವ ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗೋಗಿ ಗ್ರಾಮದ ನಿವಾಸಿ ಖಾಸೀಮ್ ಚೌಧರಿ (37) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದ್ದು, ಇಂದು ನಸುಕಿನ ಜಾವ ಗ್ರಾಮದ ಬಸ್ ನಿಲ್ದಾಣ ಹತ್ತಿರ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಕೊಲೆಗೆ‌‌ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಗೋಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News