ಆಂಧ್ರದ ಜಗನ್ ಮೋಹನ್ ರೆಡ್ಡಿ ಮಾದರಿಯಲ್ಲೇ ವಿಜಯೇಂದ್ರ ಸಿಎಂ ಆಗಲಿದ್ದಾರೆ: ಮಾಜಿ ಶಾಸಕ ಸುರೇಶ್ ಗೌಡ

Update: 2021-07-21 13:49 GMT

ಬೆಂಗಳೂರು, ಜು. 21: `ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೈಬಿಟ್ಟರೆ ಆಂಧ್ರ ಪ್ರದೇಶದಲ್ಲಿ ನಡೆದ ರಾಜಕೀಯ ವಿದ್ಯಮಾನದಂತೆ ಕರ್ನಾಟಕ ರಾಜ್ಯದಲ್ಲೂ ಸಂಭವಿಸುತ್ತದೆ' ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್‍ಗೌಡ ಎಚ್ಚರಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ರಾಜ್ಯದಲ್ಲಿ ಯಡಿಯೂರಪ್ಪ ಅವರ ರಾಜೀನಾಮೆ ಪಡೆದರೆ ಬಿಜೆಪಿಗೆ ಹೊಡೆತ ಬೀಳುವುದು ಖಚಿತ. ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರನ್ನು ಬದಲಿಸಬಾರದು. ಆಂಧ್ರದಲ್ಲಿ ವೈ.ಎಸ್.ರಾಜಶೇಖರ ರೆಡ್ಡಿ ನಿಧನದ ಬಳಿಕ ಅವರ ಪುತ್ರ ಜಗನ್ ಮೋಹನ ರೆಡ್ಡಿಯನ್ನು ಕಾಂಗ್ರೆಸ್ ಕಡೆಗಣಿಸಿ, ಪಕ್ಷದಿಂದ ಹೊರ ಹಾಕಿದ ಪರಿಣಾಮ, ಅವರು ಪ್ರತ್ಯೇಕ ಪಕ್ಷ ಕಟ್ಟಿ, ಏಕಾಂಗಿ ಹೋರಾಟ ನಡೆಸಿ ಸಿಎಂ ಆದರು. ಅದೇ ರೀತಿ ರಾಜ್ಯದಲ್ಲೂ ಆಗುತ್ತದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು.

`ಆಂಧ್ರದಲ್ಲಿ ಜಗನ್ ಮೋಹನ ರೆಡ್ಡಿ ಮುಖ್ಯಮಂತ್ರಿ ಆದಂತೆ ಇಲ್ಲೂ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಆಗುತ್ತಾರಾ ಎಂಬ ಪ್ರಶ್ನೆಗೆ, ಹೌದು ಅದೇ ರೀತಿ ಆಗಬಹುದು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಪ್ರತಿ ಸಲವೂ ಅವರಿಗೆ ತೊಂದರೆ ನೀಡಲಾಗುತ್ತಿದೆ. ಈ ಬಾರಿ ತೊಂದರೆ ಕೊಟ್ಟರೆ ಪಕ್ಷಕ್ಕೆ ಕಷ್ಟ ಎದುರಾಗಬಹುದು' ಎಂದು ಸುರೇಶ್ ಗೌಡ ಇದೇ ವೇಳೆ ಪ್ರತಿಕ್ರಿಯೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News