ನಾಯಕತ್ವ ಬದಲಾವಣೆ ಗೊಂದಲ ಸರಿಪಡಿಸಿ: ಅಖಿಲ ಭಾರತ ವೀರ ಶೈವ ಮಹಾಸಭೆ ಒತ್ತಾಯ

Update: 2021-07-21 14:38 GMT

ಬೆಂಗಳೂರು, ಜು. 21: `ಮುಖ್ಯಮಂತ್ರಿ. ಬಿ.ಎಸ್.ಯಡಿಯೂರಪ್ಪ ಅವರನ್ಬು ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಕೆಳಗಿಳಿಸದೆ, ಈ ಸಂಬಂಧ ಸದ್ಯ ಇರುವ ಎಲ್ಲ ಗೊಂದಲಗಳನ್ನು ಬಿಜೆಪಿ ಹೈಕಮಾಂಡ್ ಕೂಡಲೇ ಮಧ್ಯಪ್ರವೇಶಿಸಿ ತೆರೆ ಎಳೆಯಬೇಕು' ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಮಹಾತೇಶ್ ಪಾಟೀಲ್, `ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ತಮ್ಮದೆ ಶ್ರಮ ಹಾಕಿದ್ದಾರೆ. ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತವೆ. ಈ ಮಧ್ಯೆ ನಾಯಕತ್ವದ ಬದಲಾವಣೆಯ ಗೊಂದಲ ಸೃಷ್ಟಿಸಿ, ಜನರನ್ನು ದಿಕ್ಕು ತಪ್ಪಿಸುವ ಕಾರ್ಯ ನಡೆಸುವುದು ಸರಿಯಲ್ಲ' ಎಂದು ಆಕ್ಷೇಪಿಸಿದರು.

ಇದೇ ವೇಳೆ ಮಾತನಾಡಿದ ಮಹಾಸಭಾದ ಯುವ ಘಟಕದ ಅಧ್ಯಕ್ಷ ಜಿ.ಮನೋಹರ್ ಅಬ್ಬಿಗೆರೆ, `ಕೊರೋನ ಸಂಕಷ್ಟ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇದರ ನಡುವೆ ಪ್ರತಿನಿತ್ಯ ನಾಯಕತ್ವ ಬದಲಾವಣೆ ಎಂಬ ವಿಷಯವನ್ಬು ಸಾರ್ವಜನಿಕರಲ್ಲಿ ಮೂಡಿಸಿ ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಿರಿಯ ನಾಯಕರು ಇದಕ್ಕೆ ತಡೆ ನೀಡಬೇಕು' ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News