ಉಳ್ಳಾಲ : ಟೀಂ ಬಿ-ಹ್ಯೂಮನ್, ಮಕ್ಕಚ್ಚೇರಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಉಚಿತ ರಕ್ತದಾನ ಶಿಬಿರ

Update: 2021-07-21 17:54 GMT

ಮಂಗಳೂರು : ಟೀಂ ಬಿ-ಹ್ಯೂಮನ್, ಮಕ್ಕಚ್ಚೇರಿ ಫ್ರೆಂಡ್ಸ್ ಸರ್ಕಲ್ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸಹಯೋಗದೊಂದಿಗೆ ಉಚಿತ ರಕ್ತದಾನ ಶಿಬಿರವು ಉಳ್ಳಾಲದ ಟಿಪ್ಪು ಸುಲ್ತಾನ್ ಕಾಲೇಜು ಆವರಣದಲ್ಲಿ ಸೋಮವಾರ ನಡೆಯಿತು.

ಸುಮಾರು 100 ಯುನಿಟ್ ರಕ್ತವನ್ನು ಈ ಸಂದರ್ಭ ಸಂಗ್ರಹಿಸಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮೂಲಕ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ರಕ್ತನಿಧಿಗೆ ನೀಡಲಾಯಿತು.

ಟೀಂ ಬಿ-ಹ್ಯೂಮನ್ ಇದರ ಸ್ಥಾಪಕರಾದ ಆಸಿಫ್ ಡೀಲ್ಸ್ ಅವರು ರಕ್ತದಾನ ಮಾಡಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಕ್ಕಚ್ಚೇರಿ ಫ್ರೆಂಡ್ಸ್ ಸರ್ಕಲ್ ನ ಅಧ್ಯಕ್ಷ ರಝಾಕ್ ಹಾಜಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಳ್ಳಾಲ ಠಾಣೆಯ ವೃತ್ತ ನಿರೀಕ್ಷಕ ಸಂದೀಪ್ ಜಿ.ಎಸ್., ಟೀಮ್ ಬಿ-ಹ್ಯೂಮನ್ ಸ್ಥಾಪಕರಾದ ಆಸಿಫ್ ಡೀಲ್ಸ್, ಸಯ್ಯದ್ ಮದನಿ ದರ್ಗಾ ಶರೀಫ್ ಅಧ್ಯಕ್ಷ ರಶೀದ್ ಹಾಜಿ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್, ಸ್ಥಳೀಯ ನಗರ ಸಭಾ ಕೌನ್ಸಿಲರ್ ಮುಹಮ್ಮದ್, ರೆಡ್ ಕ್ರಾಸ್ ಸೊಸೈಟಿ ಕಾರ್ಯಪ್ರವೃತ್ತಕ ಪ್ರವೀಣ್ ಕುಮಾರ್, ಕಾಂಗ್ರೆಸ್ ಮುಖಂಡ ಯೂ.ಬಿ. ಸಲೀಂ, ಟೀಂ ಬಿ-ಹ್ಯೂಮನ್ ನ ನಾಸಿರ್ ಉಚ್ಚಿಲ, ಉಳ್ಳಾಲ ನಗರ ಸಭೆ ಕೌನ್ಸಿಲರ್ ಗಳಾದ ಇಬ್ರಾಹಿಂ ಖಲೀಲ್ ಹಾಗೂ ಸ್ವಪ್ನ ಹರೀಶ್ ಮುಂತಾದವರು ಭಾಗವಹಿಸಿದ್ದರು.

ಉಳ್ಳಾಲ ಠಾಣೆಯ ಸಂದೀಪ್ ಜಿ.ಎಸ್., ಅವರು ಮಾತನಾಡಿ, ರಕ್ತದಾನದ ಮಹತ್ವವನ್ನು ವಿವರಿಸಿದರು. ಟೀಮ್ ಬಿ-ಹ್ಯೂಮನ್ ಹಾಗೂ ಮುಕಚೇರಿ ಫ್ರೆಂಡ್ಸ್ ಸರ್ಕಲ್ ಇದರ ಸಮಾಜ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಸಿವಿಲ್ ಸರ್ವೀಸಸ್ ನಂತಹ ವೃತ್ತಿಪರ ಪರೀಕ್ಷೆಗಳ ಬಗ್ಗೆ ಕಾರ್ಯಾಗಾರವನ್ನು ಏರ್ಪಡಿಸುವಂತೆಯೂ ಅದಕ್ಕೆ ಸಂಪೂರ್ಣವಾಗಿ ಸಹಕಾರ ನೀಡುವುದಾಗಿಯೂ ಅವರು ತಿಳಿಸಿದರು.

ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್, ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ರಶೀದ್ ಹಾಜಿ ಹಾಗೂ ಕೌನ್ಸಿಲರ್  ಮಹಮ್ಮದ್ ಅವರು ರಕ್ತದಾನದ ಮಹತ್ವದ ಬಗ್ಗೆ ಮಾತನಾಡಿದರು.

ಮನ್ಸೂರ್ ಕಾರ್ಯಕ್ರಮವನ್ನು ನಿರೂಪಿಸಿದರು. ಮುಕಚ್ಚೇರಿ ಫ್ರೆಂಡ್ಸ್ ಸರ್ಕಲ್ ಉಪಾಧ್ಯಕ್ಷ ಇಸ್ಮಾಯಿಲ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News