ಸೋಷಿಯಲ್‌ ಫೋರಮ್ ಒಮನ್ ಮಾಜಿ ಅಧ್ಯಕ್ಷ ಅಬ್ದುಲ್ ಹಮೀದ್ ನಿಧನ

Update: 2021-07-23 13:30 GMT

ಬಂಟ್ವಾಳ : ಸೋಷಿಯಲ್‌ ಫೋರಮ್ ಒಮನ್ ಇದರ ಮಾಜಿ ಅಧ್ಯಕ್ಷ, ಸಮಾಜ ಸೇವಕ, ಉದ್ಯಮಿ ಅಬ್ದುಲ್ ಹಮೀದ್ (54) ಕೆಲವು ದಿನಗಳ ಅಸೌಖ್ಯದಿಂದ ಬುಧವಾರ ರಾತ್ರಿ ಒಮನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೆಹರೂ ನಗರದ ನಿವಾಸಿ ದಿ.  ಜೆ.ಹಸನಬ್ಬ ಎಂಬವರ ಪುತ್ರ ಅಬ್ದುಲ್ ಹಮೀದ್ ಅವರು 30ಕ್ಕೂ ಅಧಿಕ ವರ್ಷಗಳಿಂದ ಒಮನ್ ನಲ್ಲಿ ನೆಲೆಸಿದ್ದಾರೆ. ಇತ್ತೀಚಿಗೆ ಅವರು ಕೋವಿಡ್ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಲಾಂಡ್ರಿ ಉದ್ಯಮಿಯಾಗಿದ್ದ ಅವರು ನಿರಂತರ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಸೋಷಿಯಲ್‌ ಫೋರಂ ಒಮನ್ ಮೂಲಕ ಒಮನ್ ನಲ್ಲಿ ಸಂಕಷ್ಟಕ್ಕೆ ಒಳಗಾದ ಅನಿವಾಸಿ ಭಾರತೀಯರಿಗೆ ನೆರವಾಗುತ್ತಿದ್ದು, ಅನಿವಾಸಿ ಭಾರತೀಯರ ಪ್ರೀತಿಗೆ ಪಾತ್ರರಾಗಿದ್ದರು.

ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹವನ್ನು ಊರಿಗೆ ತರಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News