ಬಿಎಸ್ ವೈ ರಾಜೀನಾಮೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅರುಣ್ ಸಿಂಗ್

Update: 2021-07-22 13:26 GMT

ಹೊಸದಿಲ್ಲಿ, ಜು. 22: `ದಯವಿಟ್ಟು ನನ್ನನ್ನು ಈಗ ಬಿಟ್ಟುಬಿಡಿ. ಮುಂದಿನ ವಾರ ಸಿಗೋಣ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಧ್ಯಮ ಪ್ರತಿನಿಧಿಗಳಿಗೆ ಕೈ ಮುಗಿದು ಬೇಡಿಕೊಂಡಿದ್ದಾರೆ.

ಗುರುವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ' ಬಗ್ಗೆ ಪ್ರಶ್ನಿಸಿದರೆ, ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಆ ಮೂಲಕ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆಂಬ ಪರೋಕ್ಷ ಸುಳಿವನ್ನು ಹೈಕಮಾಂಡ್ ನೀಡಿದಂತಾಗಿದೆ. 

ಈ ಹಿಂದೆ ಅರುಣ್ ಸಿಂಗ್ ಅವರು, `ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆಂದು ಹೇಳಿದ್ದರು. ಆದರೆ, ಇದೀಗ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಈ ಮೂಲಕ ಮೊದಲ ಬಾರಿ ಬಿಎಸ್‍ವೈ ರಾಜೀನಾಮೆ ವಿಚಾರವಾಗಿ ಉಸ್ತುವಾರಿ ಮೌನಕ್ಕೆ ಶರಣಾಗಿರುವುದು ಹಲವು ಪ್ರಶ್ನೆಗಳನ್ನು ಸೃಷ್ಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News