ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗೆ ಮೂತ್ರಪಿಂಡ ವೈಫಲ್ಯ;ವರದಿ
Update: 2021-07-22 20:48 IST
ಬೆಂಗಳೂರು, ಜು.22: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ನವೀನ್ ಎಂಬಾತನಿಗೆ ಮೂತ್ರಪಿಂಡ ವೈಫಲ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳ ತಂಡ ಗುಂಡಿಟ್ಟು ಹತ್ಯೆ ಮಾಡಿತ್ತು. ಈ ಪ್ರಕರಣ ಸಂಬಂಧ ನವೀನ್‍ನನ್ನು ಪೊಲೀಸರು ಬಂಧಿಸಿದ್ದರು.
ಇದೀಗ ಜೈಲಿನಲ್ಲಿದ್ದ ಆರೋಪಿ ನವೀನ್ ಅನಾರೋಗ್ಯದಿಂದ ಬಳಲುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಪಿ ನವೀನ್‍ಗೆ ಕಳೆದ ಐದು ದಿನದಿಂದ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.