ಐದು ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಸಭೆ ಮುಂದೂಡಿಕೆ
Update: 2021-07-22 20:57 IST
ಮಂಗಳೂರು, ಜು.22: ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಧ್ಯಕ್ಷತೆಯಲ್ಲಿ ಜು.23ರಂದು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಬೇಕಾಗಿದ್ದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಆಹ್ವಾನಿತ ಕಾಂಗ್ರೆಸ್ ಮುಖಂಡರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ಮುಂದಿನ ದಿನಗಳಲ್ಲಿ ಕೆಪಿಸಿಸಿ ನಿರ್ದೇಶನದ ಮೇರೆಗೆ ಸಭೆಯ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.