ಹಿರಿಯ ಪತ್ರಕರ್ತ ವೀರಪ್ಪ ಗೋರಂಟ್ಲಿ ನಿಧನ
Update: 2021-07-22 22:35 IST
ಬೆಂಗಳೂರು, ಜು.22: ಕೊಪ್ಪಳದ ಹಿರಿಯ ಪತ್ರಕರ್ತ, ಸಾಹಿತಿ ವಿಠ್ಠಪ್ಪ ಗೋರಂಟ್ಲಿ (78) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪತ್ನಿ, ಇಬ್ಬರು ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ. ಕನ್ನಡ ರಾಜ್ಯೋತ್ಸವ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ವಿಠ್ಠಪ್ಪ, ಲಂಕೇಶ್ ಪತ್ರಿಕೆ, ಸುದ್ದಿ ಮೂಲ ಪತ್ರಿಕೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಜನಪರ ಚಳುವಳಿಗಳಲ್ಲಿ ತೊಡಗಿಸಿಕೊಂಡಿದ್ದರು.
ಸಂತಾಪ: ಕಾರ್ಯನಿರತ ಪತ್ರಕರ್ತರ ಸಂಘದ ಜೊತೆಗೆ ಅವಿನಾಭಾವ ಸಂಬಂಧ ಹೊಂದಿದ್ದ ವಿಠ್ಠಪ್ಪ ಗೋರಂಟ್ಲಿ ನಿಧನದಿಂದ, ಒಬ್ಬ ಕ್ರಿಯಾಶೀಲ ಪತ್ರಕರ್ತರನ್ನು ಕಳೆದುಕೊಂಡಂತಾಗಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಶೋಕಿಸಿದೆ.
ಗೋರಂಟ್ಲಿ ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘ ಪ್ರಾರ್ಥಿಸಿದೆ.