ಸುಲಿಗೆ ಪ್ರಕರಣ: ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್, ಇತರ ಐವರ ವಿರುದ್ಧ ಎಫ್‌ಐಆರ್ ದಾಖಲು

Update: 2021-07-22 17:21 GMT

ಮುಂಬೈ, ಜು. 22: ಪ್ರಕರಣ ಹಿಂಪಡೆಯಲು ಬಿಲ್ಡರ್ ಓರ್ವರಿಂದ 15 ಕೋಟಿ ರೂಪಾಯಿ ಲಂಚದ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್, ಐವರು ಪೊಲೀಸ್ ಸಿಬ್ಬಂದಿ ಹಾಗೂ ಇತರ ಇಬ್ಬರು ವ್ಯಕ್ತಿಗಳ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬಿಲ್ಡರ್ ನೀಡಿದ ದೂರಿನ ಆಧಾರದಲ್ಲಿ ದಕ್ಷಿಣ ಮುಂಬೈಯ ಮರಿನಾ ಡ್ರೈವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಬಿಲ್ಡರ್‌ನ ಇಬ್ಬರು ಪಾಲುದಾರರಾದ ಸುನೀಲ್ ಜೈನ್ ಹಾಗೂ ಸಂಜಯ್ ಪುನಾಮಿಯಾ ಅವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

 ತನ್ನ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂದೆ ಪಡೆಯಲು 15 ಕೋಟಿ ರೂಪಾಯಿ ಲಂಚ ನೀಡುವಂತೆ ಜೈನ್ ಹಾಗೂ ಪುನಾಮಿಯಾ ಅವರು ಪೊಲೀಸ್ ಅಧಿಕಾರಿಯೊಂದಿಗೆ ಸೇರಿ ಬೇಡಿಕೆ ಒಡ್ಡಿದ್ದಾರೆ ಎಂದು ಬಿಲ್ಡರ್ ದೂರಿನಲ್ಲಿ ಆರೋಪಿಸಿದ್ದಾರೆ. ಬಿಲ್ಡರ್ ತನ್ನ ದೂರಿನಲ್ಲಿ ಇತರರೊಂದಿಗೆ ಮುಂಬೈಯ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರ ಹೆಸರನ್ನು ಕೂಡ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News