ಪಂಜಾಬ್: ಬಸ್ ಅಪಘಾತದಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಮೃತ್ಯು, ಕನಿಷ್ಠ 60 ಮಂದಿಗೆ ಗಾಯ

Update: 2021-07-23 05:25 GMT

ಚಂಡಿಗಡ: ಪಂಜಾಬ್‌ನ ಮೊಗಾ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತದಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಇಂದು ಟ್ವೀಟ್ ಮಾಡಿದ್ದಾರೆ.

ಹೊಸದಾಗಿ ನೇಮಕಗೊಂಡ ರಾಜ್ಯ ಕಾಂಗ್ರೆಸ್ ಅಧ್ಯಕ್ಷ  ನವಜೋತ್ ಸಿಂಗ್ ಸಿಧು ಅವರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಪಕ್ಷದ ಕಾರ್ಯಕರ್ತರು ಬಸ್ ನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದಾರೆ.

"ಮೊಗಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಹಾಗೂ ಕನಿಷ್ಟ 60 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡ ಎಲ್ಲರಿಗೂ ತಕ್ಷಣವೇ ಸಂಪೂರ್ಣ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಹಾಗೂ ಸರಕಾರಕ್ಕೆ ವರದಿಯನ್ನು ಕಳುಹಿಸುವಂತೆ ಮೊಗಾ ಡಿಸಿ ಅವರಿಗೆ ನಿರ್ದೇಶನ ನೀಡಿದ್ದೇನೆ" ಎಂದು ಕ್ಯಾಪ್ಟನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News