ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ಸ್ಥಿರ: ಡಾ.ಮುಹಮ್ಮದ್ ತಾಹಿರ್

Update: 2021-07-23 13:16 GMT

ಮಂಗಳೂರು, ಜು.23: ನಗರದ ಯೆನೆಪೊಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಕಳೆದ ಐದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸಿಗ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ಯೆನೆಪೊಯ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹಿರ್ ತಿಳಿಸಿದ್ದಾರೆ.

ಆಸ್ಕರ್ ಅವರು ದಿನನಿತ್ಯದ ವ್ಯಾಯಾಮ ಸಮಯದಲ್ಲಿ ತಲೆಗೆ ಸಣ್ಣ ಗಾಯವಾದ ನಂತರ ‘ಇಂಟ್ರಾಕ್ರೇನಿಯಲ್’ ರಕ್ತಸ್ರಾವಕ್ಕೆ ಒಳಗಾಗಿದ್ದರು. ಅವರಿಗೆ ಈ ಮೊದಲೇ ಇದ್ದಂತಹ ಹೃದಯ ಮತ್ತು ಮೂತ್ರಪಿಂಡದ ಸಮಸ್ಯೆಗಳಿಂದ ಅವರ ಆರೋಗ್ಯ ಸ್ಥಿತಿ ಜಟಿಲವಾಗಿತ್ತು. ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಐದು ದಿನಗಳ ಹಿಂದೆ ತಲೆಗೆ ಪೆಟ್ಟಾಗಿರುವ ಕಾರಣ ಸದ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಿನ ಮಟ್ಟಿಗೆ ಅವರ ಆರೋಗ್ಯ ಪರಿಸ್ಥಿತಿಯು ಕ್ಲಿಷ್ಟಕರವಾಗಿದ್ದರೂ ಸ್ಥಿರವಾಗಿದೆ ಎಂದು ಯೆನೆಪೊಯ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹಿರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News