×
Ad

ಕೆ.ಎಸ್.ಈಶ್ವರಪ್ಪರನ್ನು ಮುಖ್ಯಮಂತ್ರಿ ಮಾಡಲು ಹೈಕಮಾಂಡ್‍ಗೆ ಮನವಿ

Update: 2021-07-23 18:55 IST

ಬೆಂಗಳೂರು, ಜು. 23: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು. ಒಂದು ವೇಳೆ ಅವರನ್ನು ಬದಲಾವಣೆ ಮಾಡಿದರೆ ಕುರುಬ ಸಮುದಾಯದ ಹಿರಿಯ ಮುಖಂಡ ಹಾಗೂ ಬಿಜೆಪಿ ನಾಯಕ, ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಬೇಕೆಂದು ಹಿಂದುಳಿದ ವರ್ಗಗಳ ಮುಖಂಡರು ಬಿಜೆಪಿ ಹೈಕಮಾಂಡ್‍ಗೆ ಮನವಿ ಮಾಡಿದ್ದಾರೆ. 

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಹಿಂದ ಮುಖಂಡ ಕೆ.ಮುಕುಡಪ್ಪ, `ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನಮ್ಮ ಬೆಂಬಲವಿದೆ. ವಯೋಮಿತಿ ಕಾರಣ ನೀಡಿ ಅವರನ್ನು ಬದಲಾಯಿಸುವುದಾದರೆ ಅವರ ಸಮಕಾಲೀನರಾದ ಹಾಗೂ ಹಿಂದುಳಿದ ವರ್ಗಗಳ ಮುಖಂಡ ಕೆ.ಎಸ್.ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

`2018ರಿಂದ 2013ರ ವರೆಗೆ ಬಿಜೆಪಿ ಅಧಿಕಾರವಿದ್ದ ಸಂದರ್ಭದಲ್ಲಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸದಾನಂದಗೌಡ ಹಾಗೂ ಲಿಂಗಾಯಿತ ಸಮುದಾಯಕ್ಕೆ ಸೇರಿದ ಜಗದೀಶ್ ಶೆಟ್ಟರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಿತ್ತು. ರಾಜ್ಯದ 31 ಜಿಲ್ಲೆಗಳಲ್ಲಿ ಕುರುಬ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಇದೆ. ಇದನ್ನು ಗಮನಿಸಿ ಹೈಕಮಾಂಡ್ ಸಮುದಾಯದ ಮುಖಂಡ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಬೇಕು' ಎಂದು ಒತ್ತಾಯಿಸಿದರು.

ಕೋಲಿ ಸಮಾಜದ ಮುಖಂಡ ತಿಪ್ಪಾರೆಡ್ಡಿ, ಸವಿತ ಸಮಾಜದ ಎಂ.ಬಿ.ಶಿವಪ್ಪ, ಮಾಲಿ ಸಮಾಜದ ಬಸವರಾಜ ಬಾಳೇಕಾಯಿ, ಯಾದವ ಸಮುದಾಯದ ಪ್ರಸನ್ನಕುಮಾರ್, ವಿಶ್ವಕರ್ಮ ಸಮುದಾಯದ ವಿಶ್ವನಾಥ್ ವಿಶ್ವಕರ್ಮ, ಈಡಿಗ ಸಮಾಜದ ಬಸವರಾಜ ಓಟೂರು, ಹುಚ್ಚಪ್ಪ ಮರಸ ಸೇರಿದಂತೆ ವಿವಿಧ ಮುಖಂಡರು ಸುದ್ದಿಗೋಷ್ಟಿಯಲ್ಲಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News