ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ; ರಾತ್ರಿ ಸಂಚಾರಕ್ಕೆ ಅವಕಾಶ ನಿಷೇಧ: ಚಿಕ್ಕಮಗಳೂರು ಜಿಲ್ಲಾಧಿಕಾರಿ

Update: 2021-07-23 13:39 GMT

ಬೆಳ್ತಂಗಡಿ : ಭಾರೀ ಮಳೆಯ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ರಸ್ತೆಯ ಸಂಚಾರ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದ್ದು ರಾತ್ರಿ ಸಂಚಾರಕ್ಕೆ ಅವಕಾಶ ನಿಷೇಧಿಸಲಾಗಿದೆ.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಭೂ ಕುಸಿತವಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಇದೀಗ ಹೊಸ ಮಾರ್ಗಸೂಚಿಯನ್ನು ನೀಡಿದ್ದು, ಚಿಕ್ಕಮಗಳೂರು ಜಿಲ್ಲಾಧಿಕಾರಿ ಹೊಸ ಆದೇಶ ಹೊರಡಿಸಿದ್ದಾರೆ.

ಚಾರ್ಮಾಡಿ ಘಾಟ್ ರಸ್ತೆ ಇಂದಿನಿಂದ ಬೆಳಗ್ಗೆ 6 ರಿಂದ ರಾತ್ರಿ 7 ಗಂಟೆವರೆಗೆ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಹಾಗೆ ರಾತ್ರಿಯ ವೇಳೆ ಎಲ್ಲಾ ವಾಹನಗಳ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಘನ ವಾಹನಗಳಿಗೆ ಘಾಟಿಯಲ್ಲಿ ಸಂಚಾರವನ್ನು ಈ ಹಿಂದೆಯೇ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹೊಸ ಆದೇಶವನ್ನು ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News