×
Ad

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಲಸಿಕೆ ಶಿಬಿರ

Update: 2021-07-23 20:46 IST

ಮಂಗಳೂರು, ಜು. 23: ನಗರದ ಪಾಂಡೇಶ್ವರ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನಲ್ಲಿ ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡುವ ಶಿಬಿರ ಶುಕ್ರವಾರ ಜರಗಿತು.

ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಸ್. ಐತಾಳ್ ಕೋವಿಡ್ ವಾರಿಯರ್ಸ್‌ಗಳನ್ನು ಈ ಸಂದರ್ಭ ಅಭಿನಂದಿಸಿ ದರು. ಈ ಸಂದರ್ಭ ತಾಲೂಕು ಆರೋಗ್ಯಾಧಿಕಾರಿ ಸುಜಯ್, ಜ್ಯೋತಿ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸುರೇಖಾ, ಸುಪ್ರಿತ, ವಿಜಯ್, ವಿದ್ಯಾ ಹಾಗೂ ರೇವಂತ್ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 700 ಮಂದಿಗೆ ಲಸಿಕೆ ನೀಡಲಾಯಿತು. ಈ ವೇಳೆ ಶ್ರೀನಿವಾಸ್ ವಿಶ್ವವಿದ್ಯಾಲಯದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ.ಎಂ. ಅಣ್ಣಯ್ಯ ಕುಲಾಲ್ ಉಳ್ತೂರು, ಕಾಲೇಜಿನ ನೋಡಲ್ ಅಧಿಕಾರಿ ಪ್ರೊ.ನೆಲ್ಸನ್ ಪಿರೇರಾ, ವಿವಿಧ ಕಾಲೇಜಿನ ಡೀನ್‌ಗಳು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News