×
Ad

ಕೋವಿಡ್-19: ಆಗಸ್ಟ್ 2 ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಕಲಬುರಗಿ ಜಿಲ್ಲಾಧಿಕಾರಿ ಆದೇಶ

Update: 2021-07-23 20:49 IST
 ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ

ಕಲಬುರಗಿ,ಜು.23: ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಕಲಬುರಗಿ ಜಿಲ್ಲೆಯಾದ್ಯಂತ 2021ರ ಜುಲೈ 19ರ ಬೆಳಿಗ್ಗೆ 6 ಗಂಟೆಯಿಂದ ಆಗಸ್ಟ್ 2ರ ಬೆಳಗಿನ 6 ಗಂಟೆಯವರೆಗೆ ವಿಪತ್ತು ನಿರ್ವಹಣಾ ಕಾಯ್ದೆ-2005 ಕಲಂ 34 (ಎಂ) ರನ್ವಯ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ಹಾಗೂ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ದಿನಾಂಕ 03-07-2021 ರಂದು ರಾಜ್ಯ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯೊಂದಿಗೆ ಹೆಚ್ಚುವರಿಯಾಗಿ 2021ರ ಆಗಸ್ಟ್ 2ರ ಬೆಳಿಗ್ಗೆ 6 ಗಂಟೆಯವರೆಗೆ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದ್ದು, 2021ರ ಆಗಸ್ಟ್ 2ರ ಬೆಳಿಗ್ಗೆ 6 ಗಂಟೆಯವರೆಗೆ ಪ್ರತಿದಿನ ರಾತ್ರಿ 10 ರಿಂದ ಬೆಳಗಿನ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. 

ಪ್ರಸ್ತುತ ಜಾರಿಯಲ್ಲಿರುವ ಮಾರ್ಗಸೂಚಿಗಳೊಂದಿಗೆ ಹೆಚ್ಚುವರಿಯಾಗಿ 2021ರ ಆಗಸ್ಟ್ 2ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುವ ಮಾರ್ಗಸೂಚಿಯ ವಿವರ ಇಂತಿದೆ. ಪ್ರಸ್ತುತ ಜಾರಿಯಲ್ಲಿರುವ ಮಾರ್ಗಸೂಚಿಗಳನ್ವಯ ಕಲಬುರಗಿ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕಪ್ರ್ಯೂ ಜಾರಿಗೊಳಿಸಲಾಗಿದೆ. 

ಸಿನಿಮಾ ಹಾಲ್ಗಳು, ಮಲ್ಟಿಪ್ಲೆಕ್ಸ್ಗಳು, ಚಿತ್ರಮಂದಿರಗಳು, ರಂಗಮಂದಿರಗಳು, ಸಭಾಂಗಣಗಳು ಮತ್ತು ಅದೇ ತರಹದ ಸ್ಥಳಗಳು ಅದರ ಆಸನ ಸಾಮರ್ಥ್ಯದ ಶೇ. 50ರಷ್ಟುದೊಂದಿಗೆ ಕೋವಿಡ್-19 ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳ ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತುಗಳಿಗೊಳಪಟ್ಟು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. 

ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕಾಲೇಜುಗಳು ಮತ್ತು ಸಂಸ್ಥೆಗಳು 2021ರ ಜುಲೈ 26 ರಿಂದ ಪುನ: ತೆರೆದು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದ್ದು, ಕೋವಿಡ್ ಲಸಿಕೆಯ ಕನಿಷ್ಠ ಒಂದು ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ, ಇತರೆ ಸಿಬ್ಬಂದಿಗಳು ಮಾತ್ರ ಕಾಲೇಜು ಹಾಗೂ ಸಂಸ್ಥೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದ್ದು, ವಿದ್ಯಾರ್ಥಿಗಳ ರಾಜರಾತಿ ಐಚ್ಛಿಕವಾಗಿರುತ್ತದೆ. ಕೋವಿಡ್ 19 ಸೂಕ್ತ ನಡವಳಿಕೆ ಮತ್ತು ಸಂಬಂಧಿತ ಇಲಾಖೆಗಳು ನೀಡುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತುಗಳಿಗೆ ಒಳಪಟ್ಟು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.

ದೀರ್ಘಾವಧಿಯ ತಾಂತ್ರಿಕ ಕೋರ್ಸ್ ಗಳನ್ನು ಒಳಗೊಂಡಂತೆ ಎಲ್ಲಾ ಕೌಶಲ್ಯ ಅಭಿವೃದ್ಧಿ ತರಬೇತಿಗಳಿಗೆ ಕೋವಿಡ್ 19 ಸೂಕ್ತ ನಡವಳಿಕೆ ಪಾಲಿಸುವ ಷರತ್ತುಗೊಳಪಟ್ಟು ಅನುಮತಿ ನೀಡಲಾಗಿದ್ದು, ಕೋವಿಡ್-19 ಲಸಿಕೆಯ ಕನಿಷ್ಠ ಒಂದು ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ, ಇತರೆ ಸಿಬ್ಬಂದಿಗಳು ಮಾತ್ರ ಸಂಸ್ಥೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. 

ದಿನಾಂಕ: 03-07-2021 ರ ಸರ್ಕಾರದ ಆದೇಶ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ಸಂಪರ್ಕ ಆದೇಶಗಳು ಹಾಗೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳ ವಿಶೇಷ ಕಣ್ಗಾವಲು ಕ್ರಮಗಳಿಗೆ ಸಂಬಂಧಿಸಿದ ಆದೇಶಗಳು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News