ಉದಯ್ ಗಾಣಿಗ ಕೊಲೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ತಿರಸ್ಕೃತ

Update: 2021-07-23 15:48 GMT

ಕುಂದಾಪುರ, ಜು.23: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣದ ಆರೋಪಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಜಾಮೀನು ಅರ್ಜಿಯನ್ನು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತಿರಸ್ಕೃರಿಸಿದೆ.

ಬಾಲಚಂದ್ರ ಭಟ್ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ ರುವ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ, ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಆರೋಪಿಗೆ ಜಾಮೀನು ನೀಡಿದಲ್ಲಿ ಸಾಕ್ಷ್ಯ ನಾಶ ಸಂಭವವಿದೆ ಎಂದು ವಾದಿಸಿದ್ದಾರೆ. ಅದರಂತೆ ನ್ಯಾಯಾಧೀಶ ರವೀಂದ್ರ ಎಂ.ಜೋಷಿ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದರು.

ಜೂ.5 ರಾತ್ರಿ ವೇಳೆ ಯಡಮೊಗೆ ಗ್ರಾಪಂ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಇತರರು ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಆ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಬಗ್ಗೆ ಶಂಕರನಾರಾ ಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಸಂಬಂಧ ಪ್ರಾಣೇಶ್ ಯಡಿಯಾಳ್, ರಾಜೇಶ್ ಭಟ್, ಬಾಲಚಂದ್ರ ಭಟ್, ಮನೋಜ್ ಕುಮಾರ್ ಹಾಗೂ ಸದಾಶಿವ ನಾಯ್ಕ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಇವರೆಲ್ಲರು ನ್ಯಾಯಾಂಗ ಬಂಧನದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News