×
Ad

ಆಸ್ಕರ್ ಆರೋಗ್ಯಕ್ಕೆ ಪ್ರಾರ್ಥಿಸಿ ಉಡುಪಿ ಚರ್ಚಿನಲ್ಲಿ ಪ್ರಾರ್ಥನೆ

Update: 2021-07-23 21:25 IST

ಉಡುಪಿ, ಜು.23: ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಪ್ರಾಥನಾರ್ ವಿಧಿಯನ್ನು ನೆರವೇರಿಸಲಾಯಿತು.

ಈ ವೇಳೆ ಉಡುಪಿ ಚರ್ಚಿನ ಧರ್ಮಗುರು ವಂ.ಚಾರ್ಲ್ಸ್ ಮಿನೇಜಸ್, ಸಹಾಯಕ ಧರ್ಮಗುರು ವಂ.ಅಶ್ವಿನ್ ಆರಾನ್ಹಾ, ಇತರ ಧರ್ಮಗುರುಗಳಾದ ವಂ.ರೋಯ್ಸನ್, ವಂ.ಸ್ಟೀಫನ್, ವಂ.ವಿಲಿಯಂ ಮಾರ್ಟಿಸ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ ಅಮೀನ್ ಪಡುಕೆರೆ, ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೊ, ರೋಶನಿ ಒಲಿವೇರಾ, ಡೆರಿಕ್ ಡಿಸೋಜಾ, ಲೆಸ್ಲಿ ಆರೋಝಾ, ಶಾಂತಿ ಪಿರೇರಾ, ಕೆಥೊಲಿಕ್ ಸಭಾ ಅಧ್ಯಕ್ಷ ಮೇರಿ ಡಿಸೋಜಾ ಮೊದಲಾದವರು ಉಪಸ್ಥೀತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News