ಕೆಓಎಸ್ ಪರೀಕ್ಷೆ; ನಿಷೇಧಾಜ್ಞೆ ಜಾರಿ
Update: 2021-07-23 21:31 IST
ಉಡುಪಿ, ಜು.23: ರಾಜ್ಯ ಮುಕ್ತ ಶಾಲೆ-ಕೆ.ಓ.ಎಸ್ ಪರೀಕ್ಷೆಗಳು ಜು.26 ರಿಂದ ಆಗಸ್ಟ್ 4ರವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಹಾಗೂ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ಪರೀಕ್ಷೆಗಳು ನಡೆಯುವ ದಿನದಂದು ಬೆಳಗ್ಗೆ 8 ರಿಂದ ಅಪರಾಹ್ನ 2 ಗಂಟೆಯವರೆಗೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.