ಉಡುಪಿ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ
Update: 2021-07-23 22:04 IST
ಉಡುಪಿ, ಜು.23: ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮಪಂಚಾಯತ್‌ಗಳ ಸಹಯೋಗದಲ್ಲಿ ಉಡುಪಿ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ ಆ.2ರಿಂದ 4 ರವರೆಗೆ ನಡೆಯಲಿದ್ದು ಉಡುಪಿ ತಾಲೂಕು ಪಂಚಾಯತ್ ಆವರಣದಲ್ಲಿ ಆ.2 ರಂದು ಸಮಗ್ರ ಕೃಷಿ ಮಾಹಿತಿ ರಥಕ್ಕೆ ಶಾಸಕ ರಘುಪತಿ ಭಟ್ ಚಾಲನೆ ನೀಡಲಿದ್ದಾರೆ.
ಬ್ರಹ್ಮಾವರ ಹೋಬಳಿ: ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ ಜು.26 ರಿಂದ ಜು.28ರವರೆಗೆ ನಡೆಯಲಿದ್ದು, ಜು.26ರಂದು ಬ್ರಹ್ಮಾವರ ತಾಲೂಕು ಪಂಚಾಯತ್ ಆವರಣದಲ್ಲಿ ಸಮಗ್ರ ಕೃಷಿ ಮಾಹಿತಿ ರಥಕ್ಕೆ ಶಾಸಕ ರಘುಪತಿ ಭಟ್ ಚಾಲನೆ ನೀಡಲಿದ್ದಾರೆ.
ಕೋಟ ಹೋಬಳಿ: ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ ಜುಲೈ 29ರಿಂದ ಜು.31ರವರೆಗೆ ನಡೆಯಲಿದೆ. ಕಾಪು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ ಆ.5ರಿಂದ 7ರವರೆಗೆ ನಡೆಯಲಿದ್ದು ಆ.7ರಂದು ಕಾಪು ತಾಲೂಕು ಕಚೇರಿ ಆವರಣದಲ್ಲಿ ಕೃಷಿ ಮಾಹಿತಿ ರಥಕ್ಕೆ ಶಾಸಕ ಲಾಲಾಜಿ ಆರ್.ಮೆಂಡನ್ ಚಾಲನೆ ನೀಡಲಿದ್ದಾರೆ