ಉಡುಪಿ: ಕರಾಟೆಯಲ್ಲಿ 56 ಪದಕ ಗೆದ್ದ ರಿಷಬ್ ಶೆಟ್ಟಿ

Update: 2021-07-24 12:00 GMT

ಉಡುಪಿ: ಜಿಲ್ಲೆಯ ದೊಂಡೇರಂಗಡಿ ಮೂಲದ ರಿಷಬ್ ಶೆಟ್ಟಿ ಮಾರ್ಷಲ್ ಆರ್ಟ್ಸ್ ನಲ್ಲಿ ವಿಶಿಷ್ಟ ಸಾಧನೆ ಮಾಡಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಮುಂಬೈನಲ್ಲಿ ನೆಲೆಸಿರುವ ರಿಷಬ್ ತನ್ನ ಹದಿಮೂರನೇ ವಯಸ್ಸಿಗೆ ಕರಾಟೆಯಲ್ಲಿ 56 ಪದಕಗಳನ್ನು ಗೆದ್ದಿದ್ದಾನೆ.

ರಿಷಬ್ ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ದೊಂಡೇರಂಗಡಿಯ ವಿಮಲಾ ಮತ್ತು ಅರುಣ್ ಶೆಟ್ಟಿ ದಂಪತಿಯ ಪುತ್ರ. ದೇಶಕ್ಕೆ ಹಾಗೂ ಊರಿಗೆ ಹೆಮ್ಮೆ ತಂದಿದ್ದಾನೆ. ಇದೀಗ ಏಷ್ಯಾ ಬುಕ್ ಆಫ್ ರೆಕಾರ್ಡ್ 2021 ಸಾಧನೆಯನ್ನು ಮಾಡಿದ್ದಾನೆ. ಚಿಕ್ಕಂದಿನಿಂದ ಮುಂಬೈನಲ್ಲಿ ಬೆಳೆದಿರುವ ಕಾರಣ ಕನ್ನಡ ಗೊತ್ತಿಲ್ಲ.

ರಿಷಬ್ ಶೆಟ್ಟಿ ಮಾತನಾಡಿ, ನನಗೆ ಚಿಕ್ಕಂದಿನಿಂದಲೇ ಕರಾಟೆ ಮೇಲೆ ಆಸಕ್ತಿ. ತಂದೆ ತಾಯಿ ಬಹಳ ಸಪೋರ್ಟ್ ಮಾಡಿದ್ದಾರೆ. ನನ್ನ ಗುರುಗಳು ಕೂಡಾ ಹೆಚ್ಚು ಮುತುವರ್ಜಿ ವಹಿಸಿದ್ದಾರೆ. ಮುಂದೆ ಇಂಟರ್ ನ್ಯಾಶನಲ್ ಲೆವೆಲ್ ಕಾಂಪಿಟೇಶನ್ ಹೋಗಬೇಕು ಎಂಬ ಆಸೆಯಿದೆ ಎಂದರು.

ಎರಡು ವರ್ಷ ಲಾಕ್ಡೌನ್ ಸಂದರ್ಭವನ್ನು ರಿಷಬ್ ಸದುಪಯೋಗಪಡಿಸಿಕೊಂಡಿದ್ದಾನೆ. ದಿನಪೂರ್ತಿ ಕರಾಟೆ ಅಭ್ಯಾಸವನ್ನು ಮಾಡುತ್ತಿದ್ದ. ಮಾರ್ಷಲ್ ಆರ್ಟ್ಸ್ ನ ವೀಡಿಯೋಗಳನ್ನು ನೋಡೋದು. ತಮ್ಮ ಶಿಕ್ಷಕರ ಜೊತೆ ಅದನ್ನು ಪ್ರ್ಯಾಕ್ಟೀಸ್ ಮಾಡುವುದು. ಆನ್ ಲೈನ್ ಕ್ಲಾಸ್ ಮುಗಿಸಿ ಮನೆಯಲ್ಲೂ ನಿರಂತರ ಶ್ರಮವಹಿಸಿದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದು, ಸ್ಥಳೀಯರು ರಿಷಬ್ ಸಾಧನೆಗೆ ಶುಭ ಹಾರೈಸಿದ್ದಾರೆ.

ದೀಕ್ಷಿತ್ ದೊಂಡೇರಂಗಡಿ ಮಾತಮಾಡಿ, ರಿಷಬ್ ನಮ್ಮ ಊರಿನ ಹೆಮ್ಮೆ. ಏಷ್ಯಾ ಬುಕ್ ರೆಕಾರ್ಡ್ ಮಾಡಿರುವುದು ಸಣ್ಣ ಸಾಧನೆ ಅಲ್ಲ. ನಮ್ಮ ಊರಿನ ಹುಡುಗ ಎಂದು ಹೇಳಲು ಹೆಮ್ಮೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News