×
Ad

ಮೊಟ್ಟೆಗಳ ಖರೀದಿಯಲ್ಲಿ ಅವ್ಯವಹಾರ ಆರೋಪ: ಲೋಕಾಯುಕ್ತ ತನಿಖೆಗೆ ಸಿದ್ದರಾಮಯ್ಯ ಆಗ್ರಹ

Update: 2021-07-24 21:34 IST

ಬೆಂಗಳೂರು, ಜು.24: ಲಂಚದ ಹಣಕ್ಕೆ ರಾಜ್ಯ ಬಿಜೆಪಿ ನಾಯಕರು ಜೊಲ್ಲು ಸುರಿಸುತ್ತಿರುವವರು ಎಂದು ಲೋಕಕ್ಕೆ ಗೊತ್ತಿದೆ. ಆದರೆ ಇವರು ಸಣ್ಣಮಕ್ಕಳು ಮತ್ತು ಗರ್ಭಿಣಿಯರ ತಟ್ಟೆಗೂ ಕೈಹಾಕುವ ಮಟ್ಟಕ್ಕೆ ಇಳಿದಿರುವುದು ಖಾಸಗಿ ಸುದ್ದಿ ವಾಹಿನಿ ನಡೆಸಿರುವ ಕುಟುಕು ಕಾರ್ಯಾಚರಣೆಯಿಂದ ಬಯಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಮಾತೃಪೂರ್ಣ' ಯೋಜನೆಯಡಿ ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮೊಟ್ಟೆಗಳ ಖರೀದಿಯಲ್ಲಿ ಲಂಚ ಪಡೆದಿರುವ ಹಗರಣದಲ್ಲಿ ಭಾಗಿಯಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಒಂದೆಡೆ ನಮ್ಮ ಸರಕಾರದ ಜನಪರ ಕಾರ್ಯಕ್ರಮಗಳಿಗೆ ಹಣ ನೀಡದೆ ಸ್ಥಗಿತಗೊಳಿಸುವ ಹುನ್ನಾರ ನಡೆಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಇನ್ನೊಂದೆಡೆ ಅದೇ ಕಾರ್ಯಕ್ರಮಗಳನ್ನು ತಮ್ಮ ಜೇಬು ತುಂಬಿಕೊಳ್ಳಲು ದುರ್ಬಳಕೆ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News