ಮುಲ್ಕಿ ಬ್ಲಾಕ್ ಕಾಂಗ್ರೆಸ್‌ಗೆ ನೇಮಕ

Update: 2021-07-24 16:31 GMT
ಟಿ.ಎಚ್. ಮಯ್ಯದ್ದಿ

ಕಿನ್ನಿಗೋಳಿ, ಜು. 24: ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಟಿ.ಎಚ್. ಮಯ್ಯದ್ದಿ ಅವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಾಹುಲ್ ಹಮೀದ್, ಮಾಜಿ ಸಚಿವರಾದ ಯುಟಿ ಖಾದರ್, ಅಭಯಚಂದ್ರ ಜೈನ್‌ರ ಸಮ್ಮುಖದಲ್ಲಿ ಪಕ್ಷದ ನೇಮಕಾತಿ ಪತ್ರ ಹಸ್ತಾಂತರಿಸಲಾಯಿತು. ಟಿ.ಎಚ್. ಮಯ್ಯದ್ದಿ ಕಾಂಗ್ರೆಸ್ ಪಕ್ಷದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿದ್ದು, ಕಿನ್ನಿಗೋಳಿ ಗ್ರಾಪಂ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News