ದಿಲ್ಲಿ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ: ಇಂಡಿಗೋ, ಸ್ಪೈಸ್ ಜೆಟ್ ಸಿಬ್ಬಂದಿಗಳ ಬಂಧನ

Update: 2021-07-24 16:52 GMT
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ, ಜು. 24: 72.46 ಲ.ರೂ.ಮೌಲ್ಯದ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಇಂಡಿಗೋ ಮತ್ತು ಸ್ಪೈಸ್ ಜೆಟ್ ನ ನಾಲ್ವರು ಸಿಬ್ಬಂದಿಗಳು ಸೇರಿದಂತೆ ಏಳು ಜನರನ್ನು ದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಜು.21ರಂದು ನಡೆಸಲಾದ 24 ಗಂಟೆಗಳ ಕಾರ್ಯಾಚರಣೆ ವೇಳೆ ದಿಲ್ಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಏಳು ಜನರನ್ನು ಬಂಧಿಸುವ ಮೂಲಕ ಚಿನ್ನ ಕಳ್ಳಸಾಗಣೆ ಜಾಲವನ್ನು ಭೇದಿಸಿದ್ದಾರೆ. 

ಸೌದಿ ಅರೇಬಿಯಾದ ಜೆದ್ದಾದಿಂದ ಬಂದಿಳಿದಿದ್ದ ಇಬ್ಬರು ವ್ಯಕ್ತಿಗಳು ಅವರು ಕಳ್ಳಸಾಗಣೆ ಮಾಡುತ್ತಿದ್ದ ಚಿನ್ನದ ಜೊತೆಗೆ ಸಿಕ್ಕಿಬಿದ್ದಿದ್ದು, ನಂತರ ಇನ್ನೋರ್ವ ವ್ಯಕ್ತಿ ಮತ್ತು ಇಂಡಿಗೋ ಹಾಗೂ ಸ್ಪೈಸ್ ಜೆಟ್‌ ನ ನಾಲ್ವರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ವಶಪಡಿಸಿಕೊಳ್ಳಲಾಗಿರುವ ಚಿನ್ನದ ಮೌಲ್ಯ 72,46,353 ರೂ.ಗಳಾಗಿವೆ ಎಂದು ಇಲಾಖೆಯು ಟ್ವೀಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News