ಗೋವಿಂದ ಕಾರಜೋಳರನ್ನು ಮುಖ್ಯಮಂತ್ರಿಯಾಗಿ ನೇಮಿಸುವಂತೆ ಮಾದಿಗ ಸಂಘಟನೆಗಳ ಒಕ್ಕೂಟ ಆಗ್ರಹ

Update: 2021-07-24 17:08 GMT

ಬೆಂಗಳೂರು, ಜು.24: ಬಿಜೆಪಿ ಹಿರಿಯ ನಾಯಕ ಹಾಗೂ ದಲಿತ ಸಮುದಾಯದ ಮುಖಂಡ ಗೋವಿಂದ ಕಾರಜೋಳರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕೆಂದು ಕರ್ನಾಟಕ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸದ್ಯ ಬಿಜೆಪಿ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಚರ್ಚೆಗಳು ಮುನ್ನೆಲೆಗೆ ಬಂದಿದ್ದು, ಬಿಜೆಪಿ ಪಕ್ಷಕ್ಕಾಗಿ ಶ್ರಮಿಸಿದ ಗೋವಿಂದ ಕಾರಜೋಳ ಮುಖ್ಯಮಂತ್ರಿ ಸೂಕ್ತ ವ್ಯಕ್ತಿಯಾಗಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಮುಖಂಡರು ಗಂಭೀರವಾಗಿ ಆಲೋಚಿಸಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಹಾಗೂ ಜನಪರ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಗೋವಿಂದ ಕಾರಜೋಳ ತನ್ನದೇ ಆದ ಕೊಡುಗೆ ನೀಡಿದ್ದಾರೆ. ಹೀಗಾಗಿ ಮುಂದಿನ ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಬೇಕೆಂದು ಮಾದಿಗ ಸಂಘಟನೆಗಳ ಒಕ್ಕೂಟದ ಕೇಶವಮೂರ್ತಿ, ಅಮರ ನಾರಾಯಣ, ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News