×
Ad

ಬೆಂಗಳೂರಿನಲ್ಲಿ ಮಠಾಧೀಶರ ಸಮಾವೇಶ: ಪ್ರಹ್ಲಾದ್ ಜೋಷಿ, ಬಿ.ಎಲ್.ಸಂತೋಷ್ ವಿರುದ್ಧ ಘೋಷಣೆ

Update: 2021-07-25 19:07 IST

ಬೆಂಗಳೂರು,ಜು.25: ಇಲ್ಲಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ವರ್ತಮಾನದ ಸಮಸ್ಯೆಗಳು ಮತ್ತು ಪರಿಹಾರ ಕುರಿತು ಮಠಾಧೀಶರ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿ.ಎಸ್.ಯಡಿಯೂರಪ್ಪರ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ಯಡಿಯೂರಪ್ಪರನ್ನು ಅಧಿಕಾರದಿಂದ ಕೆಳಗಿಳಿಸುವಂತಿಲ್ಲ ಎಂದು ಕೆಲವು ಮಠಾಧೀಶರು, ಬಿಜೆಪಿ ನಾಯಕರು ಘೋಷಣೆ ಕೂಗಿ, ಒತ್ತಾಯಿಸಿದರು.

ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಬಳಿಕ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು. 

ಈ ಕುರಿತು ಪ್ರತಿಕ್ರಿಯಿಸಿದ ಷಡಕ್ಷರಿ ಮಠದ ರುದ್ರಮುನಿ ಶ್ರೀಗಳು, ಇಂತಹ ಘೋಷಣೆಗೂ ನಮ್ಮ ಸಮಾವೇಶಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಣೆ ನೀಡಿದ್ದು ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News