ದೇವಸ್ಥಾನಗಳಲ್ಲಿ ಪೂಜೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

Update: 2021-07-25 15:02 GMT

ಕೋಟ : ಕೋವಿಡ್ 2ನೆ ಅಲೆಯ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಜ್ಯದ ದೇವಸ್ಥಾನಗಳಲ್ಲಿ ಪೂಜೆ- ಪುರಸ್ಕಾರಗಳ ಪುನರ್ ಆರಂಭಕ್ಕೆ ಹಿಂದೂ ಧಾರ್ಮಿಕ ದತ್ತಿ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೋಟ ಅಮೃತೇಶ್ವರಿ ದೇಗುಲದಲ್ಲಿ ಇಂದು ವಿಶೇಷ ಸೇವೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವರು, ರಾಜ್ಯದ ದೇವಸ್ಥಾನಗಳಲ್ಲಿ ಇಂದು ಸಂಭ್ರಮದ ದಿನ. ಈವರೆಗೆ ರಾಜ್ಯದಲ್ಲಿರುವ 34,000ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇತ್ತು. ಆದರೆ ಇಂದಿನಿಂದ ಮುಖ್ಯಮಂತ್ರಿಗಳ ಆದೇಶದಂತೆ ಪೂಜೆ ಪುರಸ್ಕಾರ ಮತ್ತು ಪ್ರಸಾದ ವಿತರಣೆಗೆ ಅವಕಾಶ ಕಲ್ಪಿಸಲಾಗಿದೆ. ಅದರಂತೆ ರಾಜ್ಯದ ಎಲ್ಲಾ ದೇವಾಲಯಗಳು ಸೇವೆಗೆ ಮುಕ್ತವಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ಹೆಸರು ಕೇಳಿಬರುತ್ತಿದೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರು ಏನೇ ಹೇಳಿದರು ಎಲ್ಲರಿಗೂ ಅವರವರ ಭಾವನೆಗಳನ್ನು ವ್ಯಕ್ತಪಡಿಸುವ ಹಕ್ಕು ಇದೆ. ಆದರೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ತೆಗೆದುಕೊಳ್ಳುವ ನಿರ್ಧಾರದಂತೆ ಕೆಲಸ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ಮತ್ತು ಕಾರ್ಯನಿರ್ವಹಣಾಧಿಕಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News