​ಉಡುಪಿ: 100ಕ್ಕೇರಿದ ಕೋವಿಡ್ ಪಾಸಿಟಿವ್ ಸಂಖ್ಯೆ

Update: 2021-07-25 16:06 GMT

ಉಡುಪಿ, ಜು.25: ಶನಿವಾರ ಹಠಾತ್ತನೆ ಮೂರಕ್ಕಿಳಿದಿದ್ದ ಜಿಲ್ಲೆಯ ಕೋವಿಡ್ ಪಾಸಿಟಿವ್ ಬಂದವರ ಸಂಖ್ಯೆ ಇಂದು 100ಕ್ಕೇರಿದೆ. ನಿನ್ನೆ 3393 ಮಂದಿಯಲ್ಲಿ ಕೇವಲ ಮೂವರು ಸೋಂಕಿತರು ಮಾತ್ರ ಪತ್ತೆಯಾಗಿದ್ದರೆ, ಇಂದು 3649 ಮಂದಿಯನ್ನು ಕೊರೋನಕ್ಕಾಗಿ ಪರೀಕ್ಷೆ ನಡೆಸಿದ್ದು ಇವರಲ್ಲಿ 100 ಮಂದಿ ಹೊಸದಾಗಿ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಕೋವಿಡ್ ಬುಲೆಟಿನ್ ತಿಳಿಸಿದೆ.

ರವಿವಾರವೂ ಜಿಲ್ಲೆಯಲ್ಲಿ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ. ಹೀಗಾಗಿ ಕೋವಿಡ್‌ನಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 409ರಲ್ಲೇ ನಿಂತಿದೆ. ದಿನದಲ್ಲಿ 98 ಮಂದಿ ಗುಣಮುಖರಾಗಿದ್ದು, 751 ಮಂದಿ ಇನ್ನೂ ಸೋಂಕಿಗೆ ಸಕ್ರಿಯ ರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಕೊರೋನ ಪಾಸಿಟಿವ್ ದೃಢಪಟ್ಟ 100 ಮಂದಿಯಲ್ಲಿ 48 ಮಂದಿ ಪುರುಷರಾಗಿದ್ದರೆ, ಉಳಿದ 52 ಮಂದಿ ಮಹಿಳೆಯರು. ಇವರಲ್ಲಿ 38 ಮಂದಿ ಉಡುಪಿ ತಾಲೂಕಿನವರಾದರೆ, 28 ಮಂದಿ ಕುಂದಾಪುರ, 33 ಮಂದಿ ಕಾರ್ಕಳ ತಾಲೂಕು ಹಾಗೂ ಉಳಿದ ಒಬ್ಬರು ಹೊರಜಿಲ್ಲೆಯವರಾಗಿದ್ದಾರೆ. ಇವರಲ್ಲಿ 17 ಮಂದಿಯನ್ನು ಕೋವಿಡ್ ಆಸ್ಪತ್ರೆ ಹಾಗೂ 83 ಮಂದಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಶನಿವಾರ 98 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 67,717ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3649 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಜಿಲ್ಲೆ ಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 68,877ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,62,355 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಜಿಲ್ಲೆಯಲ್ಲೀಗ ಎಂಟು ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಯಲ್ಲಿದ್ದಾರೆ. ಇವರಲ್ಲಿ ಏಳು ಮಂದಿ ಹೊರಜಿಲ್ಲೆಯವರಾಗಿದ್ದು, ಇವರೆಲ್ಲರೂ ಮಣಿಪಾಲ ಕೆಎಂಸಿ ಹಾಗೂ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.

494 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು 494 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 264 ಮಂದಿ ಲಸಿಕೆಯ ಮೊದಲ ಡೋಸ್ ಹಾಗೂ 230 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ತಿಳಿಸಿದ್ದಾರೆ. 18ರಿಂದ 44 ವರ್ಷದೊಳಗಿನ 247 ಮಂದಿ ಹಾಗೂ 45 ವರ್ಷ ಮೇಲಿನ 247 ಮಂದಿ ಇಂದು ಲಸಿಕೆ ಪಡೆಯದವರಲ್ಲಿ ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News