ಬೆಂಗಳೂರು: ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ಇಬ್ಬರು ಮೃತ್ಯು

Update: 2021-07-25 17:01 GMT

ಬೆಂಗಳೂರು, ಜು. 25: ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಲೊಟ್ಟೆಗೊಲ್ಲಹಳ್ಳಿಯ ಭದ್ರಪ್ಪಲೇಔಟ್‍ನಲ್ಲಿ ಈ ಘಟನೆ ನಡೆದಿದ್ದು, ಐವತ್ತು ವರ್ಷದ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.ಆದರೆ, ಮೃತರ ಹೆಸರು ವಿಳಾಸ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಬೀದಿ ಬದಿ ವ್ಯಾಪಾರಿಗಳಂತೆ ಕಂಡುಬರುವ ಇವರಿಬ್ಬರೂ ದೊಡ್ಡಬ್ಯಾಲಕೆರೆ ಯಿಂದ ಬಿಇಎಲ್ ವೃತ್ತದವರೆಗೆ ಬಸ್ ಟಿಕೆಟ್ ಪಡೆದುಕೊಂಡಿದ್ದಾರೆ. ಅಲ್ಲಿಂದ ಲೊಟ್ಟೆಗೊಲ್ಲಹಳ್ಳಿಯ ಭದ್ರಪ್ಪ ಲೇಔಟ್ ಬಳಿ ರವಿವಾರ ಮುಂಜಾನೆ 5ರ ವೇಳೆ ರೈಲು ಬರುವುದು ಗಮನಿಸದೆ ಹಳಿ ದಾಟಲು ಯತ್ನಿಸಿದ್ದು, ರೈಲಿಗೆ ಸಿಕ್ಕಿ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬೈಯಪ್ಪನ ಹಳ್ಳಿ ರೈಲ್ವೆ ಪೆÇಲೀಸರು ಧಾವಿಸಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೋರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು ಮೃತರ ಗುರುತು ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News