ಸಿಎಂ ಬದಲಾವಣೆ ಬಗ್ಗೆ ಮಾಹಿತಿ ಇಲ್ಲ: ನಳಿನ್‌ ಕುಮಾರ್ ಕಟೀಲ್

Update: 2021-07-25 17:44 GMT

ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಈವರೆಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಈ ಬಗ್ಗೆ ನಾನು ಹೆಚ್ಚು ಏನನ್ನೂ ಉಲ್ಲೇಖ ಮಾಡುವುದಿಲ್ಲ. ಮುಖ್ಯಮಂತ್ರಿಗಳು ಕಾದು ನೋಡಿ ಎಂದು ಯಾವ ಭಾವನೆ, ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಅವರು ಸುದ್ದಿಗಾರರಲ್ಲಿ ಮಾತನಾಡಿದರು.

ನಾನು ಸೋಮವಾರ ಅಧಿವೇಶನ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿ ಹೈಕಮಾಂಡ್‌ನಿಂದ ಸೂಚನೆ ಬರುವ ಬಗ್ಗೆ, ಆದೇಶ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದಿದ್ದಾರೆ.

ಮುಖ್ಯಮಂತ್ರಿಯಾಗಿ ಸರ್ಕಾರ ಎರಡು ವರ್ಷ ಪೂರೈಸುತ್ತಿದೆ. ಅವರು ಹಲವಾರು ಸವಾಲುಗಳ ಮಧ್ಯೆ ಬಹಳ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ನೆರೆ, ಕೋವಿಡ್ ಎಲ್ಲವನ್ನೂ ಚೆನ್ನಾಗಿ ನಿಭಾಯಿಸಿದ್ದಾರೆ. ಆರ್ಥಿಕ ಹೊಡೆತದ ಮಧ್ಯೆಯೂ ಒಳ್ಳೆಯ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಈ ಹೊತ್ತಲ್ಲಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News