ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯಿಸಿದ್ದು ಹೀಗೆ...

Update: 2021-07-26 10:44 GMT

ಬೆಂಗಳೂರು,ಜು.26: ಮುಂದಿನ ಸಿಎಂ ಆಯ್ಕೆ ಬಗ್ಗೆ ಪಕ್ಷದ ಸಂಸದೀಯ ಮಂಡಳಿಯ ಸಭೆಯಲ್ಲಿ ನಿರ್ಧಾರ ಆಗಲಿದೆ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ. 

ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ಅವರ ರಾಜೀನಾಮೆ ಬಳಿಕ, ಬೆಂಗಳೂರಿನಲ್ಲಿ ಸುದ್ದಿಗಾರರೊಂದೊಗೆ ಮಾತನಾಡಿದ ಅವರು, ಸಂಸದೀಯ ಮಂಡಳಿಯ ಸಭೆಯಲ್ಲಿ ಹೊಸ ಸಿಎಂ ಆಯ್ಕೆಯ ಬಗ್ಗೆ ಚರ್ಚಿಸಿ ನಿರ್ಧಾರ ಆಗಲಿದೆ. ಬಳಿಕ ಪಕ್ಷದ ವೀಕ್ಷಕರು ಬೆಂಗಳೂರಿಗೆ ಆಗಮಿಸಿ ಇಲ್ಲಿನ ಶಾಸಕರು ಹಾಗೂ ಪಕ್ಷದ ಮುಖಂಡರ ಜೊತೆ ಸಮಾಲೋಚನೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News