​ಜು.27ರಿಂದ ಶಕ್ತಿ ಶಿಕ್ಷಣ ಸಂಸ್ಥೆಯ ಅಧ್ಯಾಪಕರಿಗೆ ಬೋಧನಾ ತರಬೇತಿ

Update: 2021-07-26 12:16 GMT

ಮಂಗಳೂರು, ಜು.26: ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಯ ಅಧ್ಯಾಪಕರಿಗೆ ಮೂರು ದಿನಗಳ ಬೋಧನಾ ತರಬೇತಿ ಕಾರ್ಯಾಗಾರವು ಜು.27, 28 ಮತ್ತು 29ರಂದು ಶಕ್ತಿ ಶಿಕ್ಷಣ ಸಂಸ್ಥೆಯ ರೇಷ್ಮ ಮೆಮೋರಿಯಲ್ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.

ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಕೆಎಂಸಿಯ ಸಮುದಾಯ ಔಷಧ ವಿಭಾಗದ ಹೆಚ್ಚುವರಿ ಡೀನ್ ಹಾಗೂ ಪ್ರಾಧ್ಯಾಪಕ ಡಾ.ಬಿ.ಉನ್ನೀಕೃಷ್ಣನ್ ಉದ್ಘಾಟಿಸಲಿದ್ದಾರೆ. ಕಾರ್ಯಾಗಾರದ ನಿರ್ದೇಶಕ ಡಾ. ಶಿಕಾರಿಪುರ ಕೃಷ್ಣಮೂರ್ತಿ, ಮಂಗಳೂರಿನ ಎಚ್‌ಆರ್‌ಡಿ ಸಂಶೋಧನಾ ಮತ್ತು ತರಬೇತಿ ಸಂಸ್ಥೆಯಿಂದ ಸಂಪನ್ಮೂಲ ವ್ಯಕ್ತಿಗಳಾಗಿ ಪರಮೇಶ್ವರ ಹೆಗ್ಡೆ, ಪುಷ್ಪರಾಜ್ ಮತ್ತು ವೀಣಾ ಶ್ರೀನಿವಾಸ್ ನಾಯಕತ್ವ ಮತ್ತು ಮಾನವ ಸಂಪನ್ಮೂಲ ನಿರ್ವಹಣೆ, ಸ್ವ-ಅಭಿವೃದ್ಧಿ, ಸಂವಹನ, ತಂಡ ನಿರ್ಮಾಣ, ನಡವಳಿಕೆ, ಭಾವನೆಗಳು ಮತ್ತು ಸಮಾ ಲೋಚನೆ ಕುರಿತಂತೆ ತರಬೇತಿ ನೀಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಟಿ. ರಾಜರಾಮ್ ರಾವ್ ವಹಿಸಲಿದ್ದಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಕೆ.ಸಿ. ನಾಕ್, ಕಾರ್ಯದರ್ಶಿ ಸಂಜೀತ್ ನಾಕ್, ಪ್ರಧಾನ ಸಲಹೆಗಾರ ರಮೇಶ ಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ., ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಸಂಚಾಲಕಿ ನೀಮಾ ಸಕ್ಸೇನಾ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News